ಜೂನ್ ಮೊದಲವಾರ ರಾಜ್ಯಕ್ಕೆ ಮುಂಗಾರು

ಬೆಂಗಳೂರು, ಮೇ ೨೮- ಕೇರಳಕ್ಕೆ ಮೇ ೩೧ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಂತರ ರಾಜ್ಯದ ಬಹುತೇಕ ಎಲ್ಲಾ ಕಡೆ ಮಳೆಯಾಗುವ ನಿರೀಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ರಾಜ್ಯದ ಕರಾವಳಿಯಲ್ಲಿ ಮಾತ್ರ ಮಳೆಯಾಗುತ್ತಿದ್ದು ಮೇ ೨೯ರವರೆಗೂ ಮಳೆ ಮುಂದುವರಿಯಲಿದೆ. ಈ ಅವಧಿಯಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
ನೈಋ?ತ್ಯ ಮುಂಗಾರು ಜೂನ್ ೧ರಂದು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದ್ದು, ಜೂನ್ ೫ರಂದು ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿಯೇ ರಾಜ್ಯದಲ್ಲಿ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಒಂದು ವಾರದ ಮೊದಲೇ ಮುನ್ಸೂಚನೆ ನೀಡಿತ್ತು. ಇದೀಗ ೩೧ರಂದೇ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.