ಜೂನ್ ಮೊದಲ ವಾರದಲ್ಲಿ ಮದ್ಯ ಮಾರಾಟ ಬಂದ್

ಬೆಂಗಳೂರು, ಮೇ.೨೪-ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲನೇ ವಾರದಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.
ಜೂನ್ ೩ ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ ೧ರ ಸಂಜೆ ೪ ಗಂಟೆಯಿಂದಲೇ ಬಾರ್ ಬಂದ್ ಆಗಲಿದ್ದು, ಜೂನ್ ೩ ರವರೆಗೆ ಬಂದ್ ಮಾಡಬೇಕಾಗುತ್ತೆ.
ಅದೇ ರೀತಿ, ಜೂನ್ ೪ ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.
ಜೂನ್ ೬ ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಅಂದೂ ಸಹ ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ.