ರಾಯಚೂರು,ಜೂ.೦೯-
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಬೀವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕರವರ ಸಂಯೋಗದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಭಾರತ ಸರ್ಕಾರ, ನವದೆಹಲಿರವರ ನಿರ್ದೇಶನದಂತೆ ಜೂ.೦೧ರಿಂದ ಜೂ.೩೦ರವರೆಗೆ ಬಾಲಕಾರ್ಮಿಕ ಪದ್ದತಿ ನಿರ್ಮೂಲನಾ ಅಭಿಯಾನವನ್ನು ಆಯೋಜಿಸಲಾಗಿದ್ದು ಅದರ ಅಂಗವಾಗಿ ಜಿಲ್ಲೆಯ ಮಸ್ಕಿ ಪಟ್ಟಣದ ಸರಕಾರಿ ಬಾಲಕೀಯರ ಪ್ರೌಢ ಶಾಲೆಯಲ್ಲಿ ಆಯೋಜಿಸಿದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ, ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿರವರು ಮಾತನಾಡಿದರು.
ಶಿಕ್ಷಣವೇ ಶಕ್ತಿ. ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಯಾವುದೇ ಮಗು ಶಾಲೆಯಿಂದ ಹೊರಗುಳಿದು ಬಾಲಕಾರ್ಮಿಕತೆಯಲ್ಲಿ ತೊಡಗಿಕೊಳ್ಳದಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು. ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ನೀಡಿದರು.
ಈ ಸಂದರ್ಭದಲ್ಲಿ ಮಸ್ಕಿ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಶಿಕ್ಷಣ ಇಲಾಖೆಯ ಚನ್ನಬಸವ ಮೇಟಿ, ಇಸಿಒ ರಾಮಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಹನುಮೇಶ, ಮರಿಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.