ಮೈಸೂರು,ಜೂ.೨೪-ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ ೨೭ ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ವಿಳಂಬವಾಗುತ್ತಿಲ್ಲ. ಈಗಾಗಲೇ ಆಪ್ ತಯಾರಾಗಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗೃಹಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು ಆಗಸ್ಟ್ ೧೫ ಅಥವಾ ೧೭ ರಂದು ಮನೆ ಯಜಮಾನಿಯ ಖಾತೆಗೆ ಹಣ ತಲುಪಲಿದೆ ಎಂದು ಅವರು ಹೇಳಿದರು. ಈ ಹಿಂದೆ ಗೃಹಲಕ್ಷ್ಮೀ ಯೋಜನೆ ಜಾರಿಯನ್ನು ಪ್ರಕಟಿಸಿ ಬಳಿಕ ವಾಪಸ್ ಪಡೆದಿದ್ದರು. ನಿನ್ನೆಯಷ್ಟೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಾವೇ ಈ ಯೋಜನೆಯನ್ನು ಮುಂದಕ್ಕೆ ಹಾಕಿರುವುದಾಗಿ ಹೇಳಿಕೆ ನೀಡಿದ್ದರು.