ಜೂ. 11 ರಂದು ನಗರದ ಎಲ್ಲಾ ವಿಕಲಚೇತನರಿಗೆ ಕೋವಿಡ್ ಲಸಿಕೆ

ಕಲಬುರಗಿ,ಜೂ.9:ಕಲಬುರಗಿ ಮಹಾನಗರಪಾಲಿಕೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಇವುಗಳ ಸಹಯೋಗದೊಂದಿಗೆ ಕೋವಿಡ್ ಮಹಾಮಾರಿಯಿಂದ ರಕ್ಷಿಸಿಕೊಳ್ಳಲು ಕಲಬುರಗಿ ನಗರದ ಎಲ್ಲಾ 18 ವರ್ಷ ಮೇಲ್ಪಟ್ಟ ಎಲ್ಲಾ ವಿಕಲಚೇತನರಿಗೆ ಇದೇ ಜೂನ್ 11 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿಯ ಟೌನ್‍ಹಾಲ್ (ಇಂದಿರಾ ಸ್ಮಾರಕ ಭವನ) ದಲ್ಲಿ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ನಗರದಲ್ಲಿ ಎಲ್ಲಾ ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಸುಧಾಕರ ಲೋಖಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.