ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ

ಮಂಡ್ಯ.ಮೇ.30:- ಜಿಲ್ಲಾಡಳಿತ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೂಸೈಟಿಯ ವತಿಯಿಂದ ಜೂನ್ 12 ರ ಬೆಳಿಗ್ಗೆ 10:30ಕ್ಕೆ ಕರ್ನಾಟಕ ಸಂಘದ ಆವರಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂದು ಬೆಳಿಗ್ಗೆ 10ಗಂಟೆ ಸಮಯಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಜಾಥ ಹೊರಡಲಿದ್ದು, ಜಾಥದಲ್ಲಿ ಬಾಲಕಾರ್ಮಿಕ ಪದ್ದತಿ ವಿರುದ್ಧದ ಪ್ಲೇ ಕಾರ್ಡ್ ಪ್ರದರ್ಶಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಎಲ್ಲಾ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿಯೇ ಒಟ್ಟಾಗಿ ಸೇರಿ ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪ್ರಕರಣಗಳನ್ನು ಪತ್ತೆಹಚ್ಚಿ, ಶಾಲೆಗೆ ದಾಖಲು ಮಾಡಿ ಮುಖ್ಯವಾಹಿನಿಗೆ ಸೇರಿಸಲಾಗಿದೆ. ಈ ಮಕ್ಕಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಶೇ75% ಕ್ಕಿಂತ ಹೆಚ್ಚಿಗೆ ಅಂಕ ಪಡೆದ ಮಕ್ಕಳಿಗೆ ಕಾರ್ಯಕ್ರಮದಲ್ಲಿ ರೂ.2000/- ಪೆÇ?ರತ್ಸಾಹಧನ ನೀಡಲಾಗುವುದು. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರಥಮ,ದ್ವೀತಿಯ ಹಾಗೂ ತೃತೀಯ ಬಹುಮಾನವನ್ನು ನೀಡಲಾಗುವುದು ಎಂದರು.
ಸರ್ಕಾರದ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.
ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರೇತರ ಸಂಸ್ಥೆಗಳು, ಸ್ವಸಹಾಯ ಸಂಘ ಹಾಗೂ ಬಾಲ ಕಾರ್ಮಿಕ ವಿರುದ್ಧ ಆಂದೋಲನ ನಡೆಸುತ್ತಿರುವ ಎಲ್ಲಾ ಇತರ ಸಂಘ ಸಂಸ್ಥೆಗಳು ಹಾಗೂ ಸಾಮಾಜಿಕ ಕಾರ್ಯಕರ್ತೆಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧ ಬಲವಾದ ಜನಾಭಿಪ್ರಾಯ ರೂಪುಗೊಳ್ಳುವಂತೆ ಮಾಡಬೇಕಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಶೇಖ್ ತನ್ವೀರ್ ಆಶೀಫ್, ಜಿಲ್ಲಾ ಕಾರ್ಮಿಕ ಅಧಿಕಾರಿ ಮಂಜುಳಾದೇವಿ, ಯೋಜನ ನಿರ್ದೇಶಕ ಪ್ರಭಾಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ ಜವರೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು