ಕೋಲಾರ, ಜೂ.೧೮- ಕೇಂದ್ರ ಆಯುಷ್ ಮಂತ್ರಾಲಯ ನವ ದೆಹಲಿ, ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ ಕೋಲಾರ ಇವರುಗಳ ವತಿಯಿಂದ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ ೨೧ ರಂದು ಬುಧವಾರ ಬೆಳಿಗ್ಗೆ ೬-೩೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಚರಿಸಲಾಗುತ್ತಿದೆ.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಸಂಸದ ಎಸ್.ಮುನಿಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹಮದ್, ಶಾಸಕರುಗಳಾದ ಎಸ್.ಎನ್. ನಾರಾಯಣಸ್ವಾಮಿ, ಕೆ.ವೈ ನಂಜೇಗೌಡ, ರೂಪಕಲಾ ಶಶಿಧರ್, ಜಿ.ಕೆ. ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಇಂಚರ ಗೋವಿಂದರಾಜು, ಚಿದಾ ನಂದ ಎಂ.ಗೌಡ, ಟಿ.ಛಲವಾದಿ ನಾರಾಯಣ ಸ್ವಾಮಿ ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು.
ಈ ಕಾರ್ಯಕ್ರಮದಲ್ಲಿ ನುರಿತ ಯೋಗಪುಟಗಳು ಮತ್ತು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡು ತ್ತಿದ್ದು, ಸಾರ್ವಜನಿಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಸನಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಕೋಲಾರ ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.