ಕಲಬುರಗಿ,ಜೂ.16: ಜೂನ್ 21 ರಂದು ನಡೆಯುವ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಎಂ. ರಾಚಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಪತಂಜಲಿ ಯೋಗ ಹಾಗೂ ನಾನಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ದಿನಾಚರಣೆ ನಡೆಸಲಾಗುವುದು.
ಜೂನ್ 21 ರಂದು ನಡೆಯುವ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಿರ್ಧರಿಸಲಾಯಿತು. ಜೂನ್ 21 ರಂದು ಬೆಳಿಗ್ಗೆ 6.15ಕ್ಕೆ ಯೋಗ ಅರಂಭವಾಗಲಿದ್ದು, 6.45 ರವರೆಗೆ ಯೋಗ ವೇದಿಕೆ ಕಾರ್ಯಕ್ರಮ ನಡೆಯಲಿದೆ. 6.45 ರ ನಂತರ ಯೋಗಾಸನ ಆರಂಭವಾಗಲಿದೆ. ಈ ಕಾರ್ಯಕ್ರಮಕ್ಕೆ 2000 ಜನರು ಬರುವ ಸಾಧ್ಯತೆ ಇದೆ ಎಂದರು
ಪತಂಜಲಿ ಯೋಗ ಕೇಂದ್ರ ಆರ್ಟ್ ಆಫ್ ಲಿವಿಂಗ್ ಹಾಗೂ ಯೋಗ ಕೇಂದ್ರಗಳು ಅಗತ್ಯ ಸಹಕಾರ ನೀಡಬೇಕು ಎಂದರು. ಈ ವರ್ಷದ ಘೋಷವಾಕ್ಯ“Yoga for Vasudhaiva kutumbakam” ಹಾಗೂ “ Har Aangan Yoga” ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ ಎಂದರು ಅವರು ತಿಳಿಸಿದರು.
ಅಂದು ನಡೆಯುವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕೆಲಸವನ್ನು ನಿರ್ವಹಿಸಬೇಕೆಂದರು. ಕಲಬುರಗಿ ಅಧೀನದಲ್ಲಿ ಬರುವ 8 ಮತ್ತು 9 ನೇ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಎಲ್ಲಾ ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಅವರಿಗೆ ಕರೆ ತರುವ ಜವಬ್ದಾರಿ ತಮ್ಮದಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಗಮಿಸುವವರಿಗೆ ಲಘು ಉಪಹಾರ ಮತ್ತು ನೀರಿನ ವ್ಯವಸ್ಥೆ ಯೋಗಸನ ಮಾಡಲು ಮ್ಯಾಟ್ ವ್ಯವಸ್ಥೆ ಮತ್ತು ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಮತ್ತು ಸ್ಪಚ್ಫತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳಬೇಕೆಂದರು.
ವಿ.ಐ.ಪಿ.ಗಳ ಸಲುವಾಗಿ ಯೋಗ ಮ್ಯಾಟ್ ಹಾಗೂ ಬ್ಯಾನರ್‍ಗಳ ಬಗ್ಗೆ ಕ್ರಮವಹಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗಾಯಿತ್ರಿ ಜಿ ಅವರಿಗೆ ಸೂಚಿಸಿದರು.
ಪೋಲಿಸ್ ಇಲಾಖೆಗೆ ಸುರಕ್ಷೆ ಒದಗಿಸಲು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಮಗೆ ನೀಡಿದ ಕೆಲಸ ಕಾರ್ಯಗಳ ಬಗ್ಗೆ ಜವಬ್ದಾರಿಯಿಂದ ನಿರ್ವಹಿಸಬೇಕೆಂದರು. ಅಂದು ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹೇಳಿದರು.
ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ. ಗಿರೀಜಾ ಎಸ್.ಯು. ಅವರು ಮಾತನಾಡಿ, ಜೂನ್ 20 ರಂದು ಬೆಳಿಗ್ಗೆ 6 ಗಂಟೆಗೆಯಿಂದ ಯೋಗ ನಡೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಗತ್ ಸರ್ಕಲ್ ವೃತ್ತದಿಂದ ಪ್ರಾರಂಭವಾಗಿ ತಿಮ್ಮಾಪೂರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಕ್ತಾಯವಾಲಿದೆ ಎಂದು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಪಂಥಜಲಿ ಯೋಗ,ಭೂಮಿ ಯೋಗ, ಬ್ರಹ್ಮಕುಮಾರಿ ಪ್ರಜಾಪಿತ ವಿಶ್ವವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಲಿಸ ಇಲಾಖೆ, ತೋಟಗಾರಿಕೆ ಇಲಾಖೆ ಮಹಾನಗರ ಪಾಲಿಕೆ, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದರು.