ಜೂ.21 ರಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ

ನವದೆಹಲಿ, ಜೂ. 7- ಈ ತಿಂಗಳ 21 ರಿಂದ 18 ವರ್ಷ ಮೇಲ್ಪಟ ಎಲ್ಲ ಭಾರತೀಯರಿಗೆ ಕೇಂದ್ರದಿಂದ ಉಚಿತ ಲಸಿಕೆ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ದೇಶದಲ್ಲಿ ಮೂರನೇ ಅಲೆ ಕಾಣಿಸುಕೊಳ್ಳಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಈ ಪ್ರಮುಖ ತೀರ್ಮಾನ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ದೀಪಾವಳಿ ಹಬ್ಬದ ವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ ಪಡಿತರವನ್ನು ವಿತರಿಸಲಾಗುವುದು ತಿಳಿಸಿದರು.
ಉಚಿತ ಲಸಿಕ ನೀಡಬೇಕೆಂಬ ವ್ಯಾಪಕ ಒತ್ತಡಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಉಚಿತ ಲಸಿಕೆ ನೀಡುವುದಾಗಿ ಪ್ರಕಟಿಸಿದ್ದಾರೆ‌.
ದೇಶದಲ್ಲಿ ಎರಡನೇ ಅಲೆ ಕಾಣಿಸಿಕೊಂಡು ತೀವ್ರವಾಗಿ ಬಾಧಿಸುತ್ತಿರುವ ಬೆನ್ನಲ್ಲೇ ಪ್ರಧಾನಿಯವರು 39 ನಿಮಿಷಗಳ ಕಾಲ ದೇಶ ವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,
ಕೊರೊನಾ ಸೋಂಕು ತಡೆಗೆ ಕೈಗೊಂಡ ನಿರ್ಧಾರಗಳನ್ನು ಎಳೆ ಎಳೆಯಾಗಿ ಬಿಚ್ಚುಟರು.
ಜೂನ್‌ 21 ರಿಂದ ದೀನ ದಲಿತರಿಗೆ, ಬಡವರಿಗೆ ಶ್ರೀಮಂತರಿಗೆ ಉಚಿತ ಲಸಿಕೆಯನ್ನು ವಿತರಿಸಲಾಗುವುದಯ ಎಂದು ಹೇಳಿದರು.
ಸರ್ಕಾರವೇ ಕೊರೊನಾ ಲಸಿಕೆ ಖರೀದಿಸಿ, ರಾಜ್ಯಗಳಿಗೆ ನೀಡಲಾಗುತ್ತದೆ. ಲಸಿಕೆಗಾಗಿ ರಾಜ್ಯಗಳು ಹಣ ನೀಡುವಂತಿಲ್ಲ. ಈ ಸಂಬಂಧ ಶೀಘ್ರವೇ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ವಿವರಿಸಿದರು.
ಖಾಸಗಿ ಆಸ್ಪತ್ರೆಗಳಿಗೆ ಶೇ.25ರಷ್ಟು ಖರೀದಿ ನಿಯಮದಲ್ಲಿ ಬದಲಾವಣೆ ಇಲ್ಲ. ಖಾಸಗಿ ಆಸ್ಪತ್ರೆಗಳು 125 ರೂ.ಗಿಂತ ಹೆಚ್ಚಿನ ಸರ್ವಿಸ್ ಚಾರ್ಜ್ ಪಡೆಯುವಂತಿಲ್ಲ. ಕೋವಿನ್ ಆ್ಯಪ್ ಬಗ್ಗೆ ವಿಶ್ವದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಅವರೂ ಸಹ ನಮ್ಮ ಮಾದರಿಯಲ್ಲಿಯೇ ಲಸಿಕೆ ವಿತರಣೆ ಮಾಡಲು ಮುಂದಾಗಿವೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಎಂಟು ತಿಂಗಳು ಉಚಿತವಾಗಿ ನೀಡಲಾಗಿತ್ತು. ಕೊರೊನಾ ಎರಡನೇ ಅಲೆ ಆರಂಭದಲ್ಲಿ ಏಪ್ರಿಲ್ ಮತ್ತು ಮೇನಲ್ಲಿ ಉಚಿತ ಪಡಿತರ ನೀಡಲಾಗಿತ್ತು. ಈಗ ಈ ಯೋಜನೆಯಲ್ಲಿ ದೀಪಾವಳಿವರೆಗೂ ಅಂದರೆ ನವೆಂಬರ್ ವರೆಗೂ ಉಚಿತ ಪಡಿತರ ಲಭ್ಯವಾಗಲಿದೆ.
ಜ.16 ರಿಂದ ಏಪ್ರಿಲ್ ಅಂತ್ಯದವರೆಗೆ ಕೇಂದ್ರ ಸರ್ಕಾರದ ಕಣ್ಗಾವಾಲಿನಲ್ಲಿ ಲಸಿಕೆ ಅಭಿಯಾನ ನಡೆಯುತ್ತಿತ್ತು.ಲಸಿಕೆ ಸಂಬಂಧ ಟೀಕೆಗಳು ಕೇಳಿ ಬಂದಿದ್ದವು. ದೇಶದ ಒಂದು ವರ್ಗದ ಬಗ್ಗೆ ಲಸಿಕೆ ಬಗ್ಗೆ ಆಂದೋಲನಬ ಸಹ ನಡೆಸಿದವು.
ಕೇಂದ್ರ ಲಸಿಕೆ ನೀಡುವ ಕಾರ್ಯಕ್ರಮವನ್ನು ಕೇಂದ್ರಿಕರಣ ಮಾಡಿಕೊಳ್ಳುತ್ತಿದೆ ಎಂದು ಹಲವು ರಾಜ್ಯ ಸರ್ಕಾರಗಳು ಆರೋಪಿಸಿದವು. ಹಾಗಾಗಿ ಅವರಿಗೂ ಶೇ.50ರಷ್ಟು ಜವಾಬ್ದಾರಿ ನೀಡಲಾಯಿತು. ಮೇನಲ್ಲಿ ಲಸಿಕೆಗೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಕೆಲ ರಾಜ್ಯಗಳು ಮೊದಲಿನ ವ್ಯವಸ್ಥೆಯೇ ಚೆನ್ನಾಗಿತ್ತು ಎಂದು ಹೇಳಲಾರಂಭಿಸಿದವು. ಹಾಗಾಗಿ ಲಸಿಕೆಯ ಪೂರ್ಣ ಹಂಚಿಕೆಯನ್ನು ಕೇಂದ್ರವೇ ತೆಗೆದುಕೊಳ್ಳಲಿದೆ ಎಂದು ಮೋದಿ ಸ್ಪಷ್ಟಪಡಿಸಿದರು.
ಮಕ್ಕಳ ಆರೋಗ್ಯ ದ ಬಗ್ಗೆಯೂ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಮಕ್ಜಳಿಗಾಗಿಯೇ ಎರಡು ಲಸಿಕೆಗಳ ಪರೀಕ್ಷೆ ನಡೆಯುತ್ತಿದೆ ಎಂದರು.
ದೇಶದಲ್ಕಿ ಇನ್ನು ಲಸಿಕೆಯ ಪ್ರಯೋಗಗಳು ನಡೆಯುತ್ತಿವೆ.‌ಶೀಘ್ರದಲ್ಲೇ ಇನ್ನೂ ಎರಡು ಲಸಿಕೆಗಳು ದೇಶದ ಜನರಿಗೆ ಲಭ್ಯವಾಗಲಿದೆ ಎಂದು ಮೋದಿ ತಿಳಿಸಿದರು.
ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದೆ. ಅನೇಕ ಕುಟುಂಬಗಳು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ . ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ ನಿರ್ಮಾಣವಾಗಿದೆ ಎಂದು ಹೇಳಿದರು.
ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಉತ್ಪನ್ನಗಳಿಗಾಗಿ ಯುದ್ಧನೋಪಾದಿಯಲ್ಲಿ ಕೆಲಸ ಮಾಡಲಾಯಿತು ಎಂದ ಅವರು, ವಿಶ್ವದ ಯಾವುದೇ ಭಾಗದಲ್ಲಿ ಲಭ್ಯವಿರುವ ಔಷಧಗಳನ್ನು ತರಲಾಯಿತು.. ಈ ಹೋರಾಟದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ ಎಂದು ಅವರು ಸಾರಿದರು.
ಮಿಷನ್ ಇಂದ್ರ ಧನುಷ್ ಯೋಜನೆ ಮೂಲಕ ಲಸಿಕೆ ನೀಡಲಾಗುತ್ತಿದೆ. ನಮಗೆ ಬಡ ಮಕ್ಕಳ ಬಗ್ಗೆ ಚಿಂತೆ ಇತ್ತು. ದೇಶದ ವಿಜ್ಞಾನಿಗಳು ಒಂದೇ ವರ್ಷದಲ್ಲಿ ಎರಡು ಲಸಿಕೆ ತಯಾರಿಸುವ ಮೂಲಕ ವಿದೇಶಗಳಿಗಿಂತ ಹಿಂದೆ ಇಲ್ಲ ಎಂಬುದನ್ನು ಸಾಬೀತು ಮಾಡಿದರು. ಲಸಿಕೆಯ ನೀತಿ ಸ್ಪಷ್ಟವಾಗಿದ್ದು, ಇದುವರೆಗೂ 23 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಕೊರೊನಾ ಎರಡನೇ ಅಲೆಗೂ ಮುನ್ನವೇ ಭಾರತದಲ್ಲಿ ಲಸಿಕೆ ಆರಂಭವಾಗಿತ್ತು ಎಂದರು.