ಜೂ. 3 ರಂದು ವಿಶ್ವ ತಂಬಾಕು ರಹಿತ ದಿನಾಚರಣೆ

ಕಲಬುರಗಿ.ಮೇ.31:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಹೆಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆ, ಎನ್.ಓ.ಹೆಚ್.ಪಿ., ಎನ್.ಎಸ್.ಎಸ್. ಘಟಕ, ಕೃಷಿ ಮಹಾವಿದ್ಯಾಲಯ, ವಿವಿಧ ಸಂಘ-ಸಂಸ್ಥೆಗಳು ಮತ್ತು ಜಿಲ್ಲಾ ತಂಬಾಕು ನಿಯಂತ್ರಣಾ ಕೋಶ ಇವುಗಳ ಸಂಯುಕ್ತಾಶ್ರಯದಲ್ಲಿ “ನಮಗೆ ಆಹಾರ ಬೇಕು, ತಂಬಾಕು ಅಲ್ಲ” ಎಂಬ ಘೋಷ ವಾಕ್ಯದೊಂದಿಗೆ 2023ರ ಜೂನ್ 3 ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಲಬುರಗಿಯ ಕೃಷಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ಅನ್ವರ್ ಹುಸೇನ ಮೊಗಲಾನಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕ್ರಪ್ಪ ಮೈಲಾರಿ, ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಇನಾಮದಾರ್, ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗುಪ್ತಲಿಂಗ ಬಿರಾದಾರ್, ಗುಲಬರ್ಗಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಬಿ.ಎಸ್. ನಾಶಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಸುರೇಶ ಮೇಕಿನ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

 ಸಂಪನ್ಮೂಲ ವ್ಯಕ್ತಿಗಳಾಗಿ ಕಲಬುರಗಿ ಎನ್.ಓ.ಹೆಚ್.ಪಿ. ಕಾರ್ಯಕ್ರಮ ಅಧಿಕಾರಿ ಸಂದ್ಯಾ ಡಾಂಗೆ ಅವರು “ಬಾಯಿ ಕ್ಯಾನ್ಸರ್” ಕುರಿತು ಹಾಗೂ ಕಲಬುರಗಿ ಹೆಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯ ವಿಕಿರಣ ಅಂಕೊಲಾಜಿ ಡಾ. ಶಾಂತಲಿಂಗ ನಿಗ್ಗುಡಗಿ ಅವರು “ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು” ಕುರಿತು ಮಾತನಾಡುವರು. 

ಕಲಬುರಗಿ ಕೃಷಿ ವಿಜ್ಞಾನಗಳ ಡೀನ್ (ಕೃಷಿ) ಮತ್ತು ಮುಖ್ಯಸ್ಥರಾದ ಡಾ. ಎಂ.ಎಂ. ಧನೋಜಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.