ಜೂ.30ರ ತನಕ ಅಂತಾರಾಷ್ಟ್ರೀಯ ವಿಮಾನ ಹಾರಾಟ ರದ್ದು

ನವದೆಹಲಿ, ಮೇ.28-ಮಾರಕ ಕೊರೊನಾ ಸೋಂಕು ತಡೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಜೂನ್ 30 ವರೆಗೆ ಸ್ಥಗಿತಗೊಳಿಸಲಾಗಿದೆ.
ಕಳೆದೊಂದು ವರ್ಷದಿಂದ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಪಡಿಸಲಾಗಿದೆ. ಈಗ‌ ಇನ್ನೊಂದು ತಿಂಗಳು ವಿಸ್ತರಿಸಿದೆ ಎಂದು ನಾಗರಿಕ ವಿಮಾನ ನಿರ್ದೇಶನಾಲಯ ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಗೃಹಸಚಿವಾಲಯದಿಂದ ಅನುಮತಿ ಪಡೆದವರು ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.‌ಆದರೆ ಈ ನಿಯಮ ಸರಕು ವಿಮಾನ ಸೇವೆಗಡ ಅನ್ವಯವಾಗುವುದಿಲ್ಲ.
ಕಳೆದ ವರ್ಷ ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.
ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್’ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನಕ್ಕೆ ಅನುಮತಿ‌ ನೀಡಲಾಗಿದೆ.