ಜೂ. 5 ರಂದು ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ.ಜೂ.03:ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ ಇವರ ಅಧ್ಯಕ್ಷತೆಯಲ್ಲಿ ಇದೇ ಜೂನ್ 5 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಲಿದೆ.
ಕಲಬುರಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯ ಕಲಬುರಗಿ ತಾಲೂಕಿನ ಅನುಷ್ಟಾನ ಅಧಿಕಾರಿಗಳು ತಮ್ಮ ಇಲಾಖೆಯ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕೆಂದು ಎಂದು ಕಲಬುರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.