ಕಲಬುರಗಿ,ಜೂ.3: “ವಿಶ್ವ ಪರಿಸರ ದಿನಾಚರಣೆ ಅಂಗವಾಗಿ” ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ವಿಶಾಲ ದರ್ಗಿ ಅವರು ಜೂನ್ 5 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆಯ ಗುಲ್‍ಶನ್ ಗಾರ್ಡನ್‍ದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಎಲ್ಲಾ ವಾರ್ಡ್ ಸದಸ್ಯರು, ಅಧಿಕಾರಿಗಳು, ಎಲ್ಲಾ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಬೇಕೆಂದು ಕಲಬುರಗಿ ಮಹಾನಗರ ಪಾಲಿಕೆಯ ಪರಿಸರ ಅಭಿಯಂತರರು ತಿಳಿಸಿದ್ದಾರೆ.