ಜೂ. 7 ಬಳಿಕ ಲಾಕ್ ಡೌನ್ ಬೇಡ:ಎಸ್ ಟಿಎಸ್

ಬೆಂಗಳೂರು, ಮೇ. 28-ರಾಜ್ಯದಲ್ಲಿ ಎರಡು ತಿಂಗಳಿನಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು. ಜೂ. 7ರ ನಂತರ ಲಾಕ್ ಡೌನ್ ಮುಂದುವರೆಸುವುದು ಬೇಡ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಸೋಂಕು ತಡೆಗೆ ಜೂನ್ ತಿಂಗಳವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಬೇಕೆಂಬ ಪ್ರಸ್ತಾಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೆ ಸಚಿವರು ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಲಾಕ್ ಡೌನ್ ನಿಂದಾಗಿ ದಿನಗೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಲಾಕ್ ಡೌನ್ ವಿಸ್ತರಣೆ ಬೇಡ ಎಂದರು.
ರಾಜ್ಯದಲ್ಲಿ ಕೊರೊನಾ ಇಳಿಕೆಯತ್ತ ಸಾಗಿದೆ. ಲಾಕ್ ಡೌನ್ ಜೂ. 7ರ ಬಳಿಕ ವಿಸ್ತರಿಸುವುದು ಬೇಡ.‌ಮುಖ್ಯಮಂತ್ತಿಗಳು ಅಭಿಪ್ರಾಯ ಕೇಳಿದರೆ ಇದೇ ಮಾತನ್ನು ತಿಳಿಸುವುದಾಗಿ‌ ಹೇಳಿದರು.
ಜೂನ್ 7ರ ತನಕ ಲಾಕ್ ಡೌನ್ ಮುಂದುವರಿಯಲಿದೆ. ಕೊರೊನಾ ಸ್ಥಿತಿಗತಿ ತಿಳಿದುಕೊಂಡು ಲಾಕ್‍ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಸಹಕರಿಸಿದರೆ ಲಾಕ್‍ಡೌನ್ ಮುಂದುವರಿಸುವ ಸಂದರ್ಭ ಉದ್ಭವ ಆಗಲ್ಲ. ಇಲ್ಲದಿದ್ದರೆ ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳುವುದಾಗಿ ಎಂದೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.