ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ

ನವದೆಹಲಿ : ಏ. ೧೮- ಈ ತಿಂಗಳ ೨೭, ೨೮ ಮತ್ತು ೩೦ರಂದು ನಡೆಸಲು ನಿರ್ಧರಿಸಲಾಗಿದೆ. ಜೆಇಇ ಮುಖ್ಯ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ.
ಈ ಕುರಿತಂತೆ ಕೇಂದ್ರ ಸಚಿವ ಡಾ.ರಮೇಶ್ ಪೊಕ್ರಿಯಾಲ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ದೇಶಾದ್ಯಂತ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ ಹಿನ್ನಲೆಯಲ್ಲಿ, ಜೆಇಇ ಮುಖ್ಯ ಪರೀಕ್ಷೆ ೨೦೨೧ ಅನ್ನು ಮುಂದೂಡಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಕ್ರಮ ಕೈಗೊಂಡಿದ್ದು, ಮುಂದೂಡಿಕೆ ಮಾಡಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ ೨೪ ಗಂಟೆಗಳಲ್ಲಿ ಭಾರತವು ೨,೬೧,೫೦೦ ಹೊಸ ಕರೋನ ಪ್ರಕರಣಗಳನ್ನು, ೧,೫೦೧ ಸಾವು ಮತ್ತು ೧,೩೮,೪೨೩ ಮಂದಿಯನ್ನು ಡಿಸ್ಜಾರ್ಜ್ ಮಾಡಲಾಗಿದೆ ಅಂತ ತಿಳಿಸಿದೆ. ಒಂದು ವಾರದಲ್ಲಿ ೧೨ ಲಕ್ಷಕ್ಕೂ ಹೆಚ್ಚು ಹೊಸ ಕರೋನ ಪ್ರಕರಣಗಳು ಭಾರತದಲ್ಲಿ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.