
ಬೀದರ್: ಆ.27:ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ನೀರಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ ‘ಜಲ ಜೀವನ್ ಮಿಷನ್’ ಆರಂಭಿಸಿದ್ದಾರೆ ಯೋಜನೆಯ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಬೀದರ್ ದಕ್ಷಿಣ ಶಾಸಕ ಡಾ ಶೈಲೇಂದ್ರ ಬೆಲ್ದಾಳೆ ಹೇಳಿದರು.
ತಾಲೂಕಿನ ಬಗದಲ ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದರ್ಶಿತ್ವದ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗದಿರಲು ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಪ್ರತಿಯೊಂದು ಗ್ರಾಮದಲ್ಲಿರುವ ಮನೆಗೆ ನೀರು ತಲುಪಬೇಕು ಗುತ್ತಿಗೆದಾರರು ಉತ್ತಮವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ಕ್ಷೇತ್ರದ ಹಲವು ಗ್ರಾಮಗಳ ರಸ್ತೆ, ಶಾಲಾ ಕಟ್ಟಡ, ಚರಂಡಿ ಸೇರಿದಂತೆ ಇತರೆ ಹಲವು ಸಮಸ್ಯೆಗಳಿದ್ದು, ಹಂತ ಹಂತವಾಗಿ ಬಗೆಹರಿಸಲಾಗುವುದು. ಗ್ರಾಮಸ್ಥರು ಒಗ್ಗಟ್ಟಿನಿಂದ ಬಂದು ಯಾವ ಕೆಲಸವಾಗಬೇಕು ಎಂಬುದನ್ನು ತಿಳಿಸಬೇಕು. ಎಲ್ಲರೂ ಸಹಕಾರ ನೀಡಿದರೆ ಪ್ರತಿಯೊಂದು ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಧರ್ಮಾಬಾಯಿ ಮಿಟ್ಟುಸಿಂಗ್, ಉಪಾಧ್ಯಕ್ಷ ಮಹ್ಮದ್ ಜಮೀರ, ಸದಸ್ಯರಾದ ಧನರಾಜ ಪೆÇೀಶೆಟ್ಟಿ, ಮುಖಂಡರಾದ ರಾಜರೆಡ್ಡಿ ಶಾಬಾದ, ಗುರುನಾಥ ರಾಜಗೀರಾ, ಘಾಳೆಪ್ಪ ಚೆಟ್ಟನಳ್ಳಿ, ಶಿವಕುಮಾರ ಸ್ವಾಮಿ, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.