ಜೆಡಿಎಸ್ ಎಸ್‌ಟಿ ಮೋರ್ಚಾ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿ ಸೇರ್ಪಡೆ

ಅರಕೇರಾ,ಏ.೧೧- ದೇವದುರ್ಗ ತಾಲೂಕ ಜೆಡಿಎಸ್ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಹನುಮಂತ್ರಾಯ ಪಡುಗಿನದೊಡ್ಡಿ ಅವರು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದರು.
ಶಾಸಕ ಕೆ.ಶಿವನಗೌಡ ನಾಯಕ ಅವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಶಾಸಕರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.