
ಕೋಲಾರ,ಮಾ,೧೯-ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಣಕನಹಳ್ಳಿ ನಟರಾಜ್‌ರನ್ನ ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ.ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಜಿ.ಕೆ.ವೆಂಕಟಶಿವಾರೆಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಓಡಾಡಲು ಕಷ್ಟವಾಗುತ್ತದೆ ಎಂದು ಜೆಡಿಎಸ್ ವರಿಷ್ಠಗೆ ಮನವಿ ಮಾಡಿದ್ದರಿಂದ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿದ್ದ ಬಣಕನಹಳ್ಳಿ ನಟರಾಜ್‌ರನ್ನ ನೇಮಕ ಮಾಡಿದೆ.
ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್, ಮುಖಂಡ ವಕ್ಕಲೇರಿ ರಾಮು ಇದ್ದರು.