ಜೆಡಿಎಸ್ ತೊರೆದು ಬಿಜೆಪಿ ಸೇರಿದ ಮುಂಡರಗಿ ತಾಂಡದ ೫೦ಕ್ಕೂ ಹೆಚ್ಚು ಕಾರ್ಯಕರ್ತರು

ಅರಕೇರಾ,ಏ.೧೦- ತಾಲೂಕಿನ ಮುಂಡರಗಿ ತಾಂಡದ ೩೦ಕ್ಕೂ ಅಧಿಕ ಕಾರ್ಯಕರ್ತರು ಜೆಡಿಎಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಸೋಮವಾರ ತಾಲ್ಲೂಕಿನ ಮುಂಡರಗಿ ತಾಂಡದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾದರು.
ದೇವದುರ್ಗ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಕೆ.ಶಿವನಗೌಡ ನಾಯಕ ಅವರು ನೂತನ ಕಾರ್ಯಕರ್ತರಿಗೆ ಬಿಜೆಪಿ ಶಾಲು ಹಾಕುವ ಮೂಲಕ ಸ್ವಾಗತಿಸಿದರು.
ತಾಂಡದ ಬಿಜೆಪಿ ಮುಖಂಡರಾದ ಗಂಗಣ್ಣ ಚೌಹಾಣ್ ಹಾಗೂ ಶಿವಪ್ಪ ರಾಠೋಡ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಈ ಸಂದರ್ಭದಲ್ಲಿ ಮುಂಡರಗಿ ಶ್ರೀಗಳಾದ ಶಿವಣ್ಣ ತಾತನವರು, ಗ್ರಾಮದ ಬಿಜೆಪಿ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಇದ್ದರು.