
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.12: ನಗರದ ಗುಗ್ಗರಹಟ್ಟಿ ಪ್ರದೇಶದಲ್ಲಿ ಮೊನ್ನೆ ಪಂಚರತ್ನ ಯಾತ್ರೆ ಮತ್ತು ಬಹಿರಂಗ ಸಮಾವೇಶಕ್ಕೆ ಆಗಮಿಸಿದ್ದ ಜೆಡಿಎಸ್ ವರಿಷ್ಠ, ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಜಿಲ್ಲೆಯ ಜೆಡಿಎಸ್ ನ ಎಸ್ಸಿ ಘಟಕದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಪಕ್ಷದ ಎಸ್ಸಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ಎಸ್.ಸುಧಾಕರ ಹೆಗಡೆ, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಮುಕ್ಕಣ್ಣಅವರು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಮಾಜಿ ಸಚಿವ ಎನ್.ಎಂ.ನಬಿ, ಜಿಲ್ಲಾ ಅಧ್ಯಕ್ಷ ಪಿ.ಎಸ್.ಸೋಮಲಿಂಗನಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಳ್ಳಿ ತಾಯಣ್ಣ, ನಗರ ಅಭ್ಯರ್ಥಿ ಮುನ್ನಬಾಯ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಜೋಳದರಾಶಿ ತಿಮ್ಮಪ್ಪ ಮೊದಲಾದವರು ಇದ್ದರು