ಜೆಡಿಎಸ್ ಪಕ್ಷಕ್ಕೆ ಬೆಂಬಲ- ಭೀಮನಗೌಡ

ದೇವದುರ್ಗ,ಮೇ.೦೭- ಅಭಿವೃದ್ಧಿ ಹೆಸರಿನಲ್ಲಿ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಲಾಗಿದೆ. ಅಕ್ರಮ ಮರಳು ಸಾಗಣೆ, ಮಟ್ಕಾ, ಜೂಜು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ರಾಜರೋಷವಾಗಿ ನಡೆಯುತ್ತಿವೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ ಆರೋಪಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಪ್ಠಿ ಉದ್ದೇಶಿಸಿ ಭಾನುವಾರ ಮಾತನಾಡಿದರು. ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ ಕೋಮುಗಲಭೆಗಳು ಹೆಚ್ಚಾಗಿವೆ. ಕರ್ನಾಟಕ ಕುವೆಂಪು ಸಾರಿದ ಸರ್ವಜನಾಂಗದ ಶಾಂತಿಯ ತೋಟವಾಗಿರಬೇಕೆ ವಿನಹಃ ಕೋಮುವಾದಿಗಳ ತರಬೇತಿ ಕೇಂದ್ರಗಳು ಆಗಬಾರದು. ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವುದೆ ನಮ್ಮ ಗುರಿ ಅದರೆ ಈಭಾರಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನಮ್ಮ ಸಂಘಟನೆ ನೀಡಲಿದೆ ಎಂದರು.
ಶಾಲಾ, ಕಾಲೇಜುಗಳಲ್ಲಿ ಗಲಭೆ ಸೃಷ್ಠಿ ಮಾಡಿ ವಿದ್ಯಾರ್ಥಿಗಳಲ್ಲಿ ಭಯ ಹುಟ್ಟಿಸಿ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ಬಿಜೆಪಿ ಮಾಡುತ್ತಿದೆ. ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ, ವಿವಿಧ ಸೌಲಭ್ಯಗಳು ಈವರೆಗೂ ಸಮರ್ಪಕವಾಗಿ ಜಾರಿ ಮಾಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಜಾತ್ಯತೀತ ಪಕ್ಷಗಳಿಗೆ ನಮ್ಮ ಬೆಂಬಲ ಇದೆ. ದೇವದುರ್ಗಲ್ಲಿ ಮುಂಚೂಣಿಯಲ್ಲಿ ಇರುವ ಜೆಡಿಎಸ್ ಅಭ್ಯರ್ಥಿ ಕರೆಮ್ಮ ಜಿ.ನಾಯಕಗೆ ನಮ್ಮ ಬೆಂಬಲ ಇದೆ. ಕೋಮುವಾದಿ ಬಿಜೆಪಿಯನ್ನು ಸೋಲಿಸಲು ನಾವು ಅಭಿಯಾನವನ್ನು ರಾಜ್ಯಾದ್ಯಂತ ಆರಂಭಿಸಿದ್ದೇವೆ. ಬಿಜೆಪಿಯನ್ನು ಸೋಲಿಸಿ ಕರ್ನಾಟಕನ್ನು ರಕ್ಷಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಲಾಗುವುದು ಎಂದರು.
ರಾಜ್ಯ ಸಮಿತಿ ಸದಸ್ಯ ಮಹಾಲಿಂಗ ದೊಡ್ಡಮನಿ, ಬಾಬು, ಬಾಷಾಶಾಬ್, ಹನುಮಂತ ಇದ್ದರು.