
ಜಗಳೂರು.ಏ.೨೧:- ಜಗಳೂರು ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಗಣೇಶ್ ದೇವಸ್ಥಾನದಲ್ಲಿ ಜೆಡಿಎಸ್. ಅಭ್ಯರ್ಥಿ ಮಲ್ಲಾಪುರ ದೇವರಾಜ್ ಅವರು ರಾಜ್ಯ ಜೆಡಿಎಸ್. ಕಾರ್ಯದರ್ಶಿ ಕೆ.ಬಿ.ಕಲ್ಲೇರುದ್ರೇಶ್ ಅವರೊಂದಿಗೆ ಪೂಜೆ ಸಲ್ಲಿಸಿ ನೂರಾರು ಜೆಡಿಎಸ್ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಸಿದ ನಂತರ ರಾಜ್ಯ ಜೆಡಿಎಸ್. ಪ್ರಧಾನ ಕಾರ್ಯ ದರ್ಶಿ ಕೆ.ಬಿ.ಕಲ್ಲೇರುದ್ರೇಶ್ ಮಾತನಾಡಿ ಮಾಜಿ ಮುಖ್ಯ ಮಂತ್ರಿ ಕುಮಾರ್ಸ್ವಾಮಿ ಅವರುರೈತರ ಸಾಲ ಮನ್ನಾ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ರಾಜ್ಯದಲ್ಲಿ ಜೆಡಿಎಸ್ ಅಧಿ ಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಅಲಿ, ಮಹಿಳಾ ಅಧ್ಯಕ್ಷೆ ಸುನಂದಮ್ಮ, ಪಟ್ಟಣ ಪಂಚಾಯಿತಿ ಸದಸ್ಯ ಲುಕ್ಮಾನ್ಉಲ್ಲಾಖಾನ್ ಸೇರಿದಂತೆ ಇತರೇ ಮುಖಂಡರು ಉಪಸ್ಥಿತರಿದ್ದರು.