ಜೆಡಿಎಸ್ ಪ್ರಚಾರ ವಾಹನ ಚಾಲಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ: ಆರೋಪ

ಸೇಡಂ,ಮೇ,07: ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಪಕ್ಷದ ಪ್ರಚಾರ ವಾಹನದ ಚಾಲಕನ ಮೇಲೆ ಹಲ್ಲೆ ಮಾಡಿ ನಿಂದಿಸಿದರೆಂದು ಗಂಭೀರ ಆರೋಪ ಕೇಳಿಬಂದಿದೆ. ನಿನ್ನೆ ಸಂಜೆ ತಾಲೂಕಿನ ಊಡುಗಿ ಗ್ರಾಮಕ್ಕೆ ಪ್ರಚಾರಕ್ಕೆ ತೆರಳಿದಾಗ ಸ್ಥಳೀಯ ಕಾಂಗ್ರೆಸ್ಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡಿಸಿದ್ದು ಮನ ಬಂದಂತೆ ಅವಾಚ್ಯ ಶಬ್ದಗಳಿಂದ ಬೈದು ವಾಹನ ಚಾಲಕನ ಮೇಲೆ ಹಲ್ಲೆಗೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಎಂದು ಬಲ ಮೂಲಗಳಿಂದ ತಿಳಿದು ಬಂದಿದೆ.
ಈ ಕುರಿತು ಸೇಡಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.