ಜೆಡಿಎಸ್ ಪ್ರಾಥಮಿಕ ಸದಸ್ತ್ವಕ್ಕೆ ತಿಪ್ಪೇಸ್ವಾಮಿ ವೆಂಕಟೇಶ್ ರಾಜೀನಾಮೆ


ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಫೆ.23 ಕ್ಷೇತ್ರದ ಜೆಡಿಎಸ್ ನಿಯೋಜಿತ ಅಭ್ಯರ್ಥಿ ಎಂದೇ  ಗುರುತಿಸಿಕೊಂಡಿದ್ದ ತಿಪ್ಪೇಸ್ವಾಮಿ ವೆಂಕಟೇಶ್ ಜೆಡಿಎಸ್ ಸದಸ್ತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿ ಕಳೆದ ಏಳು ವರ್ಷಗಳಿಂದ ನಾನು ಪಕ್ಷವನ್ನು ಅತ್ಯಂತ ನಿಷ್ಠಾವಂತ ಸಕ್ರಿಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೆ ಕಳೆದ ನಾಲ್ಕು ತಿಂಗಳಿಂದ  ಪಕ್ಷದಲ್ಲಿ ಹಾಗೂ ಕ್ಷೇತ್ರದ ಮಟ್ಟಿಗೆ ಮುಜುಗರ ವಾತಾವರಣ ನಿರ್ಮಾಣವಾಗಿದೆ. ನನ್ನ ಸ್ವಾಭಿಮಾನಕ್ಕೆ ದಕ್ಕೆ  ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.