ಜೆಡಿಎಸ್, ಬಿಜೆಪಿ ಮೈತ್ರಿ-ಸ್ವಾಗತ

ಚಿಕ್ಕಬಳ್ಳಾಪುರ : ಸೆ.೨೩.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಮತ್ತು ಭಾರತೀಯ ಜನತಾ ಪಕ್ಷ ಮೈತ್ರಿ ಮಾಡಿಕೊಂಡಿರುವುದು ಅತ್ಯಂತ ಶ್ಲಾಘನೀಯವಾದದು ಇದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಮಾಜಿ ಸಚಿವ ಡಾಕ್ಟರ್ ಕೆ. ಸುಧಾಕರ್ ಅವರು ತಿಳಿಸಿದರು.
ಜಾತ್ಯತೀತ ಜನತಾದಳ ಮತ್ತು ಭಾರತೀಯ ಜನತಾ ಪಕ್ಷದ ಮೈತ್ರಿ ತಾತ್ಕಾಲಿಕವಾದ ದಲ್ಲ ಬದಲಾಗಿದ್ದು ದೀರ್ಘಕಾಲದ ಮೈತ್ರಿ ಆಗಿದ್ದು ಈ ಮೈತ್ರಿಯ ಪರಿಣಾಮ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಕನಿಷ್ಠಪಕ್ಷ ೨೫ ಮಂದಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಗೆಲುವು ಸಾಧಿಸುವೆಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಪ್ರಧಾನ ಮಂತ್ರಿಗಳಾದ ಎಚ್ ಡಿ ದೇವೇಗೌಡ ರವರ ರಾಜಕೀಯ ಅನುಭವ ಹಾಗೂ ಅವರು ಎನ್.ಡಿ.ಎ ಮೈತ್ರಿಕೂಟಕ್ಕೆ ತಮ್ಮ ಜಾತ್ಯತೀತ ಜನತಾದಳವನ್ನು ಸೇರ್ಪಡೆಗೊಳಿಸಿರುವುದು ಎನ್ ಡಿ ಎ ಮೈತ್ರಿ ಕೂಟಕ್ಕೆ ಸೇರ್ಪಡೆಗೊಳ್ಳುವ ಇತರೆ ಪಕ್ಷಗಳಿಗೂ ಸಹ ಸ್ಪೂರ್ತಿದಾಯಕವಾಗಿದೆ ಎಂದು ತಿಳಿಸಿದರು.
೨೦೨೪ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಏನ್ ಡಿ ಎ ಮೈತ್ರಿ ಕೂಟ ಜಯಗಳಿಸುವುದು ಮತ್ತೊಮ್ಮೆ ನರೇಂದ್ರ ಮೋದಿ ಅವರೇ, ಭಾರತದ ಪ್ರಧಾನಿ ಆಗುವವರು ಅಲ್ಲಿಂದ ಭಾರತಕ್ಕೆ ಅಭಿವೃದ್ಧಿಯ ಯುಗ ಮತ್ತಷ್ಟು ಪ್ರಜ್ವಲಿಸಲಿದೆ ಎಂಬ ವಿಶ್ವಾಸದ ಮಾತುಗಳನ್ನು ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರನ್ನು ನಿರಾಸೆಗೊಳಿಸಿದೆ ಗ್ಯಾರಂಟಿಗಳ ಯೋಜನೆಯನ್ನು ಅನುಷ್ಠಾನಕ್ಕೆ ತರುವ ಭರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಇದೇ ರೀತಿ ಪರಿಸ್ಥಿತಿ ಮುಂದುವರದಲ್ಲಿ ರಾಜ್ಯ ದಿವಾಳಿಯಾಗುವುದು ಖಚಿತವಾಗಿದ್ದು ಈ ಸರ್ಕಾರಕ್ಕೆ ಭವಿಷ್ಯ ಇಲ್ಲವೆಂದು ಸಹ ಅವರು ತಿಳಿಸಿದರು .