ಜೆಡಿಎಸ್ ರಾಜ್ಯ ಯುವ ಉಪಾಧ್ಯಕ್ಷರಾಗಿ ರಾಜಾ ರಾಮಚಂದ್ರ ನಾಯಕ

ಮಾನ್ವಿ:ಡಿ.೦೯.ಕರ್ನಾಟಕ ರಾಜ್ಯ ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಮಾನ್ವಿಯ ಶಾಸಕ ರಾಜಾ ವೆಂಕಟಪ್ಪ ನಾಯಕರ ಸಹೋದರ ರಾಜಾ ರಾಮಚಂದ್ರ ನಾಯಕ ಅವರನ್ನು ನೇಮಕ ಮಾಡಲಾಗಿದೆ.
ನೇಮಕವಾದ ಈ ಸ್ಥಾನಕ್ಕೆ ಇದರ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ದರಾಗಿ ರಾಜ್ಯದಲ್ಲಿ ಯುವ ಜನತಾದಳ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಬೇಕೆಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಯವರು ಸೂಚಿಸಿದ್ದಾರೆ.