ಜೆಡಿಎಸ್ ಸಮಾವೇಶಕ್ಕೆ ಮಾಜಿ ಸಿಎಂ ಎಚ್‍ಡಿಕೆ ಆಗಮನ

ಕಲಬುರಗಿ ಜು 28: ಕಲಬುರಗಿ ದಕ್ಷಿಣ ಮತಕ್ಷೇತ್ರದಲ್ಲಿ ಇದೇ ಜುಲೈ 30ರಂದು ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಜಾತ್ಯತೀತ ಜನತಾದಳದ ಯುವ ಘಟಕದ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ ತಿಳಿಸಿದರು.
ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾಹಿತಿ ನೀಡಿದ ಅವರು, ಜುಲೈ 30ರಂದು ಬೆಳಿಗ್ಗೆ 11ಕ್ಕೆ ಜೆಡಿಎಸ್ ದಕ್ಷಿಣ ಮತಕ್ಷೇತ್ರದ ಸುಮಾರು 20 ಸಾವಿರ ಕಾಯ9ಕತ9ರ ಬೃಹತ್ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಶಕ್ತಿ ಪ್ರದಶ9ನ ನಡೆಯಲಿದೆ ಎಂದರು.
ಸಮಾವೇಶದಲ್ಲಿ ಭಾಗವಹಿಸಲು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಬೀದರ ದಕ್ಷಿಣ ಮತಕ್ಷೇತ್ರದ ಶಾಸಕ ಬಂಡೆಪ್ಪಾ ಖಾಶೆಂಪುರ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.ಅಂದು ಬೆಳಿಗ್ಗೆ 9-30ಕ್ಕೆ ಬೀದರ್ ಜಿಲ್ಲೆಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿ, ರಸ್ತೆಯ ಮೂಲಕ ಕಲಬುರಗಿಗೆ ಆಗಮಿಸಿ ನಗರದ ಮಲ್ಲಿಕಾರ್ಜುನ ಖಗೆ9 ಪೆಟ್ರೋಲ್ ಪಂಪ್, ಅನ್ನಪೂರ್ಣ ಕ್ರಾಸ್, ಜಗತ್ ವೃತ್ತದ ಮೂಲಕ ಮೆರವಣಿಗೆಯಲ್ಲಿ ಆಗಮಿಸಿ ವೀರಶೈವ ಕಲ್ಯಾಣ ಮಂಟಪದ ಎದುರುಗಡೆ ನಡೆಯಲಿರುವ ಸಮಾವೇಶದ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದರು.
ತಾವು ಪಕ್ಷದಲ್ಲಿ ಸುಮಾರು 14 ವಷ9ಗಳಿಂದ ಸೇವೆ ಸಲ್ಲಿಸುತ್ತಿದ್ದು, ದಕ್ಷಿಣ ಮತಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಹಿತಿ ನೀಡಿದರು.
ಬಿಜೆಪಿ ಪಕ್ಷದ ಶಾಸಕರು ದಕ್ಷಿಣ ಮತಕ್ಷೇತ್ರದಲ್ಲಿ ಗೆದ್ದು,ಕಿಂಚಿತ್ತೂ ಅಭಿವೃದ್ಧಿ ಕಾಯ9ಗಳು ಮಾಡಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡುತ್ತಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 38 ಹಳ್ಳಿಗಳಿಗೆ ತೆರಳಿ, ಗ್ರಾಮ ವಾಸ್ತವ್ಯ ಮಾಡಲಿರುವುದಾಗಿ ತಿಳಿಸಿದ ಅವರು,ದಕ್ಷಿಣ ಮತಕ್ಷೇತ್ರದಲ್ಲಿ ಅದರಲ್ಲೂ ನನ್ನ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾವೇಶದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಕಾಯ9 ಮಾಡಲಿದ್ದೇನೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಕಾಯ9ಕತ9ರು ಸೇರ್ಪಡೆ:
ಇದೇ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅನೇಕ ಕಾಯ9ಕತ9ರು ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.
ಪಾಲಿಕೆ ಬಿಕ್ಕಟ್ಟು:
ಮಹಾನಗರ ಪಾಲಿಕೆ ಚುನಾವಣೆ ಮುಗಿದು,ಹಲವು ತಿಂಗಳು ಕಳೆದರೂ ಸಹ, ಮೇಯರ್ ಚುನಾವಣೆ ನಡೆಯುತ್ತಿಲ್ಲ. ಕಾರಣ ಬಿಜೆಪಿ ವಾಮಮಾಗ9ದ ಮೂಲಕ ಅಧಿಕಾರದ ಗದ್ದುಗೆರಲು ಹೊರಟಿದ್ದು, ಮತದಾರರ ಪಟ್ಟಿಯಲ್ಲಿ ಬೇರೆಯವರ ಹೆಸರು ಸೇರಿಸಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಪಕ್ಷ ಕೋಟ9 ಮೊರೆ ಹೋಗಿದ್ದು, ಮುಂದಿನ ಪರಿಸ್ಥಿತಿ ಕಾದು ನೋಡಬೇಕಿದೆ ಎಂದರು.
ನಮ್ಮ ಪಕ್ಷದ ಮೊದಲಿನಿಂದಲೂ ನಿಲುವು ಒಂದೆಯಾಗಿದೆ. ಅಂದು ನಾವು ಮೇಯರ್ ಸ್ಥಾನ ಕೇಳಿದ್ದೆವು. ಇಂದು ಸಹ ಅದೇ ಮಾತಿಗೆ ಬದ್ಧರಾಗಿದ್ದೇವೆ ಎಂದು ನುಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಶಾಮರಾವ್ ಸೂರನ್, ಮಲಿಕ್ ನಾಗನಳ್ಳಿ, ಶಿವಲಿಂಗಪ್ಪ ಪಾಟೀಲ್, ರಾಜು ಕುಲಕರ್ಣಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಉಪಸ್ಥಿತರಿದ್ದರು.