ಬೀದರ್: ಅ.3:ತಾಲ್ಲೂಕಿನ ಮನ್ನಳ್ಳಿಯಲ್ಲಿ ಭಾನುವಾರ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಮಲ್ಲಿಕಾರ್ಜುನ (51) ಹಾಗೂ ಅವರ ಪತ್ನಿ ಶರಣಮ್ಮ (40) ಮೃತ ದಂಪತಿ. ‘ಇಬ್ಬರು ಕೃಷಿ ಕೆಲಸಕ್ಕೆಂದು ಹೊಲದಲ್ಲಿ ಹೋಗುತ್ತಿದ್ದರು. ದಾರಿ ಮಧ್ಯೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಮನ್ನಳ್ಳಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಿದ್ಯುತ್ ತಂತಿ ಕೆಳಗೆ ಬಿದ್ದರೂ ಜೆಸ್ಕಾಂನವರು ಅದನ್ನು ಸರಿಪಡಿಸಿಲ್ಲ. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಮೃತರ ಕುಟುಂಬದವರಿಗೆ ಪರಿಹಾರ ನೀಡಬೇಕು. ಜೆಸ್ಕಾಂನವರು ಭವಿಷ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.