ಜೆ.ಕೆ ಈಗ ಐರಾವನ್

ನಟ ಜೆ.ಕಾರ್ತಿಕ್ ಮತ್ತೆ ಹಿರಿತೆರೆಯಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.ಅದುವೇ “ಐರಾವನ್ “ಮೂಲಕ.
ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಧಾರಿತ ಚಿತ್ರಕ್ಕೆ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.
ರಾಮ್ಸ್ ರಂಗಾ ನಿರ್ದೇಶನ ಮಾಡುತ್ತಿರುವ ಚಿತ್ರ
ಕಾಲಭೈರವೇಶ್ವರ ಸನ್ನಿಧಿಯಲ್ಲಿ ಚಿತ್ರದ ಮುಹೂರ್ತ ನಡೆಯಿತು.ದೇವರ ಮೇಲೆ ಸೆರೆಹಿಡಿಯಲಾದ ಮೊದಲ ದೃಶ್ಯಕ್ಕೆ ನಿರಂತರ ಗಣೇಶ್ ಅವರು ಆರಂಭ ಫಲಕ ತೋರಿದರು. ತುಮಕೂರಿನ ಶ್ರೀ ಸಾಗರ ಮಹಾಸ್ವಾಮಿಗಳು ಕ್ಯಾಮೆರಾ ಚಾಲನೆ ಮಾಡಿದರು.
ನಿರಂತರ ಗಣೇಶ್ ಚಿತ್ರ ನಿರ್ಮಿಸುತ್ತಿದ್ದಾರೆ, ಎಸ್.ಪ್ರದೀಪ್ ವರ್ಮ ಸಂಗೀತ ನಿರ್ದೇಶನವಿರುವ ಚಿತ್ರಕ್ಕೆ ದೇವೇಂದ್ರಛಾಯಾಗ್ರಹಣವಿದೆ‌
ಚಿತ್ರದಲ್ಲಿ ಜೆ ಕೆ, ವಿವೇಕ್, ಅದ್ವಿತಿ ಶೆಟ್ಟಿ, ಅವಿನಾಶ್, ಕೃಷ್ಣ ಹೆಬ್ಬಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.