
ಕಲಬುರಗಿ : ನ.21:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಜಿಲ್ಲಾ ತಂಬಾಕು ನಿಯಂತ್ರಣ ಜಾಗೃತಿ ಕೋಶವು ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಸೋಮವಾರ ತಂಬಾಕು ಸೇವನೆ ತಡೆಗಟ್ಟುವ ಜಾಗೃತಿ ಕಾರ್ಯಕ್ರಮ ಜರುಗಿತು.
ನಿಯಂತ್ರಣ ಕೋಶದ ಅಧಿಕಾರಿ ಆರತಿ ಧನಶ್ರೀ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು, ತಡೆಗಟ್ಟುವ ಕ್ರಮಗಳನ್ನು ವಿವರಿಸಿದರು. ಕಾಲೇಜಿನ ಪ್ರಾಚಾರ್ಯರಾದ ಮಹಮ್ಮದ್ ಅಲ್ಲಾಉದ್ದೀನ್ ಸಾಗರ, ಎನ್.ಎಸ್.ಎಸ್.ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಜಬೀನಾ ಬೇಗಂ, ಮಲ್ಲಿಕಾರ್ಜುನ ದೊಡ್ಡಮನಿ, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಮಲ್ಲಪ್ಪ ರಂಜಣಗಿ, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ರೇಣುಕಾ ಚಿಕ್ಕಮೇಟಿ, ನಾಗಮ್ಮ, ಪ್ರ.ದ.ಸ ನೇಸರ ಎಂ.ಬೀಳಗಿಮಠ, ದ್ವಿ.ದ.ಸ ರಾಮಚಂದ್ರ ಚವ್ಹಾಣ, ಸೇವಕ ಭಾಗಣ್ಣ ಹರನೂರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.