ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯ ದಿನಾಚರಣೆ

ಕಲಬುರಗಿ : ಆ.15:ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜು, ಸರ್ಕಾರಿ ಪ್ರೌಢಶಾಲೆ ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ದೇಶದ 77ನೇ ಸ್ವಾತಂತ್ಯ ದಿನಾಚರಣೆಯನ್ನು ಅತ್ಯಂತ ಭಕ್ತಿ, ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

    ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ಅಲ್ಲಾಉದ್ದೀನ್ ಸಾಗರ ಧ್ವಜಾರೋಹಣ ನೆರವೇರಿಸಿ ದೇಶದ ಸ್ವಾತಂತ್ರ್ಯದ ಬಗ್ಗೆ ಸುಧೀರ್ಘವಾಗಿ ವಿವರಿಸಿದರು. ವಿದ್ಯಾರ್ಥಿಗಳಿಂದ ಭಾಷಣ, ಗಾಯನ ಜರುಗಿತು. ಸ್ವಾತಂತ್ರ್ಯ ಹೋರಾಟಗಾರರ ವೇಷಧರಿಸಿ ಸಂಭ್ರಮಿಸಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹೇಶಕುಮಾರ ಚಿಂಚೋಳಿ, ಮೌಲಾನಾ ಶಾಲೆಯ ಪ್ರಾಂಶುಪಾಲೆ ಲಕ್ಷ್ಮೀ ಬಿ.ನಾಯಕ, ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ರವೀಂದ್ರಕುಮಾರ ಬಟಗೇರಿ, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ರೇಣುಕಾ ಚಿಕ್ಕಮೇಟಿ, ಸಾಹೇಬಗೌಡ ಪಾಟೀಲ, ನಾಗಮ್ಮ, ಪ್ರ.ದ.ಸ ನೇಸರ ಎಂ. ಬೀಳಗಿಮಠ ಹಾಗೂ ಕಾಲೇಜು, ಪ್ರೌಢಶಾಲೆ, ಮೌಲಾನಾ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.