ಜೈನ ಮುನಿಗಳ ಹತ್ಯೆ ಖಂಡಿಸಿ ಜೈನ ಸಮಾಜದಿಂದ ಪ್ರತಿಭಟನೆ

ಸಿಂಧನೂರು,ಜು.೧೨-
ಜೈನ ಮುನಿಗಳ ಹತ್ಯೆ ಖಂಡಿಸಿ ಜೈನ ಸಮಾಜದಿಂದ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯ ಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ನಗರದ ಜೈನ ಕಲ್ಯಾಣ ಮಂಟಪದಿಂದ ಹೋರಟ ಪ್ರತಿಭಟನೆ ಮೆರವಣಿಗೆ ನಡೆಸಿ ಜೈನ ಮುನಿಗಳನ್ನು ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಮುಖ್ಯ ಮಂತ್ರಿ ಹಾಗೂ ಗೃಹ ಸಚಿವರನ್ನು ಒತ್ತಾಯ ಮಾಡಿ ಇನ್ನೂ ಮುಂದೆ ಇಂಥಹ ಪ್ರಕರಣ ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು ಅಗ್ರಹ ಪಡಿಸಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೊಟ್ಟ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ಜೈನ ಮುನಿಗಳನ್ನು ಬರ್ಬವಾಗಿ ಕೊಲೆ ಮಾಡಿದ್ದು ಇಡಿ ಜೈನ ಸಮಾಜ ಉಗ್ರವಾಗಿ ಖಂಡಿಸುತ್ತೇದೆ ಇನ್ನೂ ಮುಂದೆ ಇಂಥಹ ಪ್ರಕರಣ ಗಳು ಮರುಕಳಿಸಬಾರದು ಎಂದರೆ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೈನ ಸಮಾಜದ ಮುಖಂಡರು ಸರ್ಕಾರವನ್ನು ಒತ್ತಾಯ ಮಾಡಿದರು.
ಶ್ವೇತಾಂಬರ ಮೂರ್ತಿ ಕ್ ಸಂಘ, ವರ್ಥಮಾನ ಜೈನ ಶ್ರಾವ ಸಂಘ, ಮಹಾ ಪಂಥ ಸಭಾ ನೇತೃತ್ವದಲ್ಲಿ ಜೈನ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.