(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೧೯- ಚಿಕ್ಕೋಡಿಯ ನಂದಿ ಆಶ್ರಮದ ಜೈನ ಮುನಿಗಳ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಪ್ರಕಟಿಸಿದರು.
ವಿಪಕ್ಷಗಳ ಧರಣಿ ನಡುವೆಯೇ ಜೈನಮುನಿಗಳ ಹತ್ಯೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೈನ ಮುನಿಗಳು ನಾಪತ್ತೆಯಾಗಿ ಕೊಲೆಯಾದ ಪ್ರಕರಣದ ಬಗ್ಗೆ ವಿವರ ನೀಡಿ, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಯುತ್ತಿದೆ. ಸಾರ್ವಜನಿಕರ ಕೋರಿಕೆ ಮೇರೆಗೆ ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಪ್ರಕಟಿಸಿದರು.