ಜೈಪುರ ವಿಮಾನ ನಿಲ್ದಾಣ ಸ್ಫೋಟಿಸುವ ಬೆದರಿಕೆ

ಜೈಪುರ,೨೮-ರಾಜಸ್ತಾನದ ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳ ಶೋಧ ಕಾರ್ಯಾಚರಣೆ ಆರಂಭಿಸಿದೆ
ಬೆದರಿಕೆ ಬಂದ ನಂತರ ಇಡೀ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ವಿಮಾನ ನಿಲ್ದಾಣದ ಆಡಳಿತ ತಿಳಿಸಿದೆ. ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಅಪರಿಚಿತ ದುಷ್ಕರ್ಮಿಯೊಬ್ಬ ವಿಮಾನ ನಿಲ್ದಾಣವನ್ನು ಸ್ಫೋಟಿಸುವ ’ಬೆದರಿಕೆ’ ಇಮೇಲ್ ಬಂದಿದೆ. ಇದರ ಬೆನ್ನಲ್ಲೇ ಶೋಧ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ಹೊರಡುವ ಎಲ್ಲಾ ಪ್ರಯಾಣಿಕರು ಮತ್ತು ಅವರ ಸೂಟ್‌ಕೇಸ್, ಬ್ಯಾಗ್‌ಗಳನ್ನು ಸಹ ಪರೀಕ್ಷಿಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಹಾಯದಿಂದ ವಿಮಾನ ನಿಲ್ದಾಣವನ್ನು ಶೋಧಿಸಲಾಗಿದೆ ಆದರೆ ಎಲ್ಲಿಯೂ ಬಾಂಬ್ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಲ್ಲದೆ, ವಿಮಾನ ನಿಲ್ದಾಣದ ಆಡಳಿತ ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ.
ಈ ವರ್ಷದ ನವೆಂಬರ್‍ನಲ್ಲಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ೨ ಅನ್ನು ಸ್ಫೋಟಿಸುವ ’ಬೆದರಿಕೆ ಇಮೇಲ್’ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಬೆದರಿಕೆ ಇಮೇಲ್ ಕಳುಹಿಸಿದವರು ಸ್ಫೋಟ ತಪ್ಪಿಸಲು ೪೮ ಗಂಟೆಗಳ ಒಳಗೆ ಬಿಟ್‌ಕಾಯಿನ್‌ನಲ್ಲಿ ೧ ಮಿಲಿಯನ್ ಡಾಲರ್‍ಗಳನ್ನು ಪಾವತಿಸುವಂತೆ ಒತ್ತಾಯಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.