ಜೈಲು ಶಿಕ್ಷೆ ವಿರುದ್ಧ ನಾಳೆ ರಾಹುಲ್ ಮೇಲ್ಮನವಿ

ನವದೆಹಲಿ.ಏ೨: ಮೋದಿ ಉಪನಾಮದ ಕುರಿತ ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ಶಿಕ್ಷೆ ಆದೇಶದ ವಿರುದ್ಧ ರಾಹುಲ್ ಗಾಂಧಿ ಸೋಮವಾರ ಸೂರತ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಇದಕ್ಕಾಗಿ ಅವರ ವಕೀಲರ ತಂಡ ಸಕಲ ಸಿದ್ಧತೆಗಳನ್ನೂ ಪೂರ್ಣಗೊಳಿಸಿದೆ.
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಮಾರ್ಚ್ ೨೩ ರಂದು ದೋಷಿ ಎಂದು ಘೋಷಿಸಲಾಗಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ರಾಹುಲ್ ಗಾಂಧಿ ಅವರಿಗೆ ಜಾಮೀನನ್ನೂ ನೀಡಲಾಗಿದ್ದು, ಮೇಲ್ಮನವಿ ಸಲ್ಲಿಸಲು ೩೦ ದಿನಗಳವರೆಗೆ ಕಾಲಾವಕಾಶವನ್ನು ಒದಗಿಸಲಾಗಿದೆ. ಈ ಮಧ್ಯೆ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ತೀರ್ಪಿನ ಸಂಬಂಧ ಮೇಲ್ಮನವಿ ಸಲ್ಲಿಸಲು ಕಾನೂನು ತಂಡ ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಗುರುವಾರ ಹೇಳಿದ್ದರು.
ಈ ವಿಷಯವನ್ನು ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಪಕ್ಷ ಸಿದ್ಧವಿದೆ ಎಂದು ಹೇಳಿದ್ದ ಖರ್ಗೆ, ಕೇಂದ್ರ ಸರ್ಕಾರ ರಾಹುಲ್ ಗಾಂಧಿಯನ್ನು ತರಾತುರಿಯಲ್ಲಿ ಅನರ್ಹಗೊಳಿಸಿದೆ. ಇದು ಸೇಡಿನ ಕ್ರಮ ಎಂದು ಟೀಕಿಸಿದರು.
ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದರ ವಿರುದ್ಧ ಮತ್ತು ಅದಾನಿ ಸಮೂಹದ ವಿರುದ್ಧ ಹೊರಿಸಲಾದ ವಂಚನೆಯ ಆರೋಪಗಳ