ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ತರಬೇತಿ ಶಿಬಿರ ಯಶ್ವಸಿ


ಸಂಜೆವಾಣಿ ವಾರ್ತೆ
ಹೊಸಪೇಟೆ: ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಶಿಬಿರ ನಗರದ ಹೋಟೆಲ್ ಮಲ್ಲಿಗೆ ಸಭಾಂಗಣದಲ್ಲಿ ಜರುಗಿತು. 
ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ತರಬೇತಿ ಶಿಬಿರಕ್ಕೆ ಚಾಲನೆ ನೀಡಿದರು. ಶಿಬಿರದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಸವರಾಜ, ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯ ವೈದರು. ಶುಶ್ರೂಷಣಾಧಿಕಾರಿಗಳು ಮತ್ತು ಡಿ.ಗ್ರೂಪ್ ನೌಕರರಿಗೆ  ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ ವಿಜಯನಗರ ಹಾಗೂ ಸೂರ್ಯಕಾಂತ ಎನ್ವಿರಾನ್ಮೆಂಟ್ ಟೆಕ್ನಾಲಜೀಸ್ ಸಹಯೋಗದಲ್ಲಿ ಶಿಬಿರವನ್ನು ಸಂಘಟಿಸಲಾಗಿತ್ತು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಲೀಂ ಅಧ್ಯಕ್ಷತೆ ವಹಿಸಿದ್ದರು. ಡಾ.ಶಂಕರ್ ನಾಯ್ಕ್, ಡಾ.ಜಂಬಯ್ಯ.ಡಾ.ಷಣ್ಮುಖ ನಾಯ್ಕ್, ಡಾ.ಜಗದೀಶ್, ಪಾಟ್ನೆ, ಖಾಸಗಿ ವೈದರ ಸಂಘದ ಅಧ್ಯಕ್ಷ ಡಾ.ಶ್ರೀನಿವಾಸ ದೇಶಪಾಂಡೆ, ಮತ್ತು ಖಾತರಿ ಗುಣಮಟ್ಟದ ಉಸ್ತುವಾರಿಗಳಾದ ಡಾ.ಗುರುಪ್ರಸಾದ್, ಎಂ.ಡಿ.ಸಂಜೀವ್, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ ಹಾಗೂ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.