ಜೋಗಿಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಚಿವ ನಾರಾಯಣಸ್ವಾಮಿ ಭೇಟಿ

ಚಿತ್ರದುರ್ಗ,ಸೆ.18; ಚಳ್ಳಕೆರೆ ತಾಲ್ಲೂಕಿನ ಜೋಗಿಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆಗೆ ಭೇಟಿ ನೀಡಿದ ಸಚಿವರನ್ನು ಶಾಲಾ ಮಕ್ಕಳು ವಿವಿಧ ಹೂವು ನೀಡಿ ಸ್ವಾಗತಿಸಿದರು. ನಂತರ ಸಚಿವರು ಶಾಲಾ ಆವರಣದಲ್ಲಿ ಸಸಿ ನೆಟ್ಟು, ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಿಸಿದರು.
ನಂತರ ಸಚಿವರು ಜೋಗಿಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೊಠಡಿ ಹಾಗೂ ಶಾಲಾ ಕಾಂಪೌಂಡ್ ಆವರಣ ಮತ್ತು ಶಾಲಾ ವಾತವರಣ ವೀಕ್ಷಿಸಿ, ಶಾಲಾ ಮಕ್ಕಳೊಂದಿಗೆ ಶಾಲೆ ಆರಂಭವಾದ ಕುರಿತು ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ಶಾಲೆಯ 224 ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ನೋಟ್‍ಬುಕ್‍ಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಜಿ.ಟಿ. ಗೋವಿಂದಪ್ಪ, ಮೀಸೆ ಮಹಾಲಿಂಗಪ್ಪ, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್. ಮಹಾಂತೇಶ ಸೇರಿದಂತೆ ಮತ್ತಿತರರು ಇದ್ದರು.