ಜ್ಞಾನತಾಣ ಕಾರ್ಯಕ್ರಮ ಉದ್ಘಾಟನೆ

ಬಾದಾಮಿ,ನ10- ಸಂಸ್ಥೆಯವರು ಕೊಡಮಾಡಿದ ಅಂತರ್ಜಾಲ ಶಿಕ್ಷಣದ ಟ್ಯಾಬ್ ಮತ್ತು ಲ್ಯಾಪ್ ಟಾಪ್‍ಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಸಲಹೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಅವರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾದ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಜ್ಞಾನತಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ತಂತ್ರಜ್ಞಾನ ಬೆಳವಣಿಗೆಯಾದಂತೆ ಕಲಿಕಾ ಪ್ರಕ್ರಿಯೆಗಳು ಇಂದು ಅಂತರ್ಜಾಲದ ಮೂಲಕವೇ ನಡೆಯುತ್ತಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಹಾಯಕವಾಗುತ್ತದೆ ಎಂದು ಹೇಳಿದರು. ಸಾಂಕೇತಿಕವಾಗಿ ಐದು ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಿಸಲಾಯಿತು.
ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಮಮದಾಪೂರ ಮಾತನಾಡಿ. ಧರ್ಮಸ್ಥಳ ಸಂಸ್ಥೆಯವರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಬಡ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಕ್ ಲ್ಯಾಪಟಾಪ್ ನೀಡುತ್ತಿರವುದು ಶ್ಲಾಘನೀಯ ಎಂದು ಹೇಳಿದರು. ವೇದಿಕೆಯ ಮೇಲೆ ಮಾಜಿ ಜಿ.ಪಂ.ಸದಸ್ಯ ಡಾ.ಎಂ.ಜಿ.ಕಿತ್ತಲಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗರಾಜ ಕಾಚೆಟ್ಟಿ, ಬಿಇಒ ರುದ್ರಪ್ಪ ಹುರಳಿ, ದೈಹಿಕ ಶಿಕ್ಷಣ ಪರಿವೀಕ್ಷಕ ವಿವೇಕಾನಂದ ಮೇಟಿ ಹಾಜರಿದ್ದರು. ಯೋಜನಾಧಿಕಾರಿ ಗಣೇಶ ನಾಯಕ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಯೋಜನೆ ಜ್ಞಾನತಾಣ ಯೋಜನೆ ಬಗ್ಗೆ ಮಾಹಿತಿ ನೀಡಿದರು. ತಾಲೂಕಿನ 135 ವಿದ್ಯಾರ್ಥಿಗಳಿಗೆ ಈ ಟ್ಯಾಬ್ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.