ಜ್ಞಾನ ವಿಕಾಸ ಕಾರ್ಯಕ್ರಮದಿಂದ ಮಹಿಳೆಯರು ಮುಖ್ಯ ವಾಹಿನಿಗೆ ಬರಲು ಸಾಧ್ಯ 

ಹಿರಿಯೂರು.ಆಗಸ್ಟ್.22- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯೂರು ತಾಲೂಕಿನ ಧರ್ಮಪುರ ವಲಯದ ಖಂಡೇನಹಳ್ಳಿಯ ಶ್ರೀ ಸಂಪಿಗೆ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸಾವಿತ್ರಮ್ಮ ನವರು ದೀಪ ಬೆಳಗಿಸುವ ಮೂಲಕ  ಚಾಲನೆ ನೀಡಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು  ಯೋಜನಾಧಿಕಾರಿ  ಹರಿಪ್ರಸಾದ್ ರೈ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ ಎಂದು ಹೇಳಿದರು. ಗ್ರಾಮಭಿವೃದ್ಧಿ ಯೋಜನೆಯ ಮೂಲಕ ಅನೇಕ ಕಾರ್ಯಕ್ರಮಗಳನ್ನು ಪೂಜ್ಯರು ನೀಡಿದ್ದು ಸದಸ್ಯರು ಇದನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಬಾಲಸುಬ್ರಮಣ್ಯ. ಒಕ್ಕೂಟ ಅಧ್ಯಕ್ಷರಾದ ರೂಪ ವಲಯದ ಮೇಲ್ವಿಚಾರಕರು ಸೇವಾಪ್ರತಿನಿಧಿಗಳು  ಹಾಗೂ ಕೇಂದ್ರದ ಸದಸ್ಯರು  ಪಾಲ್ಗೊಂಡಿದ್ದರು