ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

 ಹಿರಿಯೂರು.ನ. 25 :  ಹಿರಿಯೂರು ತಾಲ್ಲೂಕಿನ ಆದಿವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರುಗನ್ ದೇವಸ್ಥಾನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಸಮಾರಂಭವನ್ನು ಶಾಸಕಿ ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ್  ಉದ್ಘಾಟನೆ ಮಾಡಿದರು. ಮಹಿಳೆಯರ ಆರೋಗ್ಯ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ತಾಲ್ಲೂಕಿನ ಯೋಜನಾಧಿಕಾರಿ ಹರಿಪ್ರಸಾದ್ ರೈ, ಸಮಾಜ ಸೇವಕಿ ಶಶಿಕಲಾ ರವಿಶಂಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರಘುನಾಯ್ಕ ಉಪಾಧ್ಯಕ್ಷ ರಂಗನಾಥ, ಸದಸ್ಯ ಮಹಾಲಿಂಗಪ್ಪ, ಯಲ್ಲಾಭೋವಿ, ತ್ರಿಯಂಬಕ ಮೂರ್ತಿ ಮುಂತಾದವರು ಉಪಸ್ಥಿತರಿದ್ದರು.