ಜ್ಞಾನ ಸುಧಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಬೀದರ:ಜೂ.16:ಇತ್ತೀಚಿಗೆ ಪ್ರಕಟಗೊಂಡ NEET-2023 ರ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಮತ್ತು ಬೀದರ್ ಜಿಲ್ಲೆಗೆ ಗೌರವ ತಂದು ಕೊಟ್ಟಿದ್ದಾರೆ.
ಈ ಸಾಧನೆಗೆ ಜ್ಞಾನ ಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಡಾ. ಪೂರ್ಣಿಮಾ ಜಾರ್ಜ್, ಜ್ಞಾನ ಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖ ಜ್ಞಾನ ಸುಧಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಚನ್ನವೀರ ಪಾಟೀಲ್, ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಸುಜಾತಾ ಬೊಮ್ಮರೆಡ್ಡಿ ಹಾಗೂ ಡಿ. ಶ್ರೀಕಾಂತ್ ರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ 611 ಮತ್ತು ಸಂಸ್ಕøತಿ 556 ಅಂಕ ಗಳಿಸುವ ಮೂಲಕ ಉಚಿತ ವೈದ್ಯಕೀಯ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ. ಇವರ ಜೊತೆಗೆ ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ಒಟ್ಟು 12 ವಿದ್ಯಾರ್ಥಿಗಳು ಉಚಿತ ವೈದ್ಯಕೀಯ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ.

ಈ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳಿಗೆ ಜ್ಞಾನ ಸುಧಾ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷೆ ಡಾ. ಪೂರ್ಣಿಮಾ ಜಾರ್ಜ್ ರವರು ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಇದರ ಶ್ರೇಯ ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಸುಜಾತಾ ಬೊಮ್ಮರೆಡ್ಡಿ, ಡಿ. ಶ್ರೀಕಾಂತ್ ರೆಡ್ಡಿ ಹಾಗೂ ಅವರ ತಂಡದವರಿಗೆ ಸಲ್ಲುತ್ತದೆ ಎಂದರು. ಈ ಸಂದರ್ಭದಲ್ಲಿ ಜ್ಞಾನ ಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖ ರವರು ಮಾತನಾಡಿ ಸುಜಾತಾ ಬೊಮ್ಮರೆಡ್ಡಿ ಹಾಗೂ ಶ್ರೀಕಾಂತ್ ರೆಡ್ಡಿ ಅವರ ತಂಡ ಅತ್ಯುತ್ತಮ ಕೆಲಸ ಮಾಡುತ್ತಿದ್ದು, NEET-2023ರ ಪರೀಕ್ಷೆಯಲ್ಲಿ ಇಂತಹ ಒಳ್ಳೆಯ ಫಲಿತಾಂಶ ನೀಡಿ ಜಿಲ್ಲೆಗೆ ಮತ್ತು ಸಂಸ್ಥೆಗೆ ಅಪಾರ ಗೌರವ ತಂದುಕೊಟ್ಟಿದ್ದಾರೆ ಎಂದರು.