ಜ್ಯೂನಿಯರ್ ಎನ್.ಟಿ.ಆರ್ ಈಗ ದೇವರ

ಆರ್ ಆರ್ ಆರ್  ಚಿತ್ರದ ನಂತರ ತೆಲುಗು ನಟ ಜ್ಯೂನಿಯರ್ ಎನ್ ಟಿಆರ್  ಇದೀಗ ಕೊರಟಾಲ ಶಿವ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾಗಿದ್ದು ಚಿತ್ರತಂಡ ಮಾತ್ರ ಇದುವರೆಗೂ ಶೀರ್ಷಿಕೆ ಘೋಷಿಸಿರಲಿಲ್ಲ.  ಜ್ಯೂನಿಯರ್ ಎನ್ ಟಿಆರ್   ಹುಟ್ಟುಹಬ್ಬದಂದು  ‘ದೇವರ’ ಎಂಬ ಶೀರ್ಷಿಕೆ ಇಡಲಾಗಿದೆ.

ಈ ಪೋಸ್ಟರ್ ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು,  ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದು. ಈ ಪೋಸ್ಟರ್ ಈಗಾಗಲೇ ಜ್ಯೂನಿಯರ್ ಎನ್.ಟಿ.ಆರ್ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಅವರ ಮಾಸ್ ಲುಕ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.

 ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ  ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.

2024ರ ಏಪ್ರಿಲ್ 6ಕ್ಕೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ, ರತ್ನವೇಲು ಛಾಯಾಗ್ರಹಣ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನವಿದೆ.