ಜ.೧೪ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಸರಳ ಆಚರಣೆ


ರಾಯಚೂರು,ಜ.೧೨- ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ರವರ ೮೪೯ ಜಯಂತಿ ಆಚರಣೆ ಕಾರ್ಯಮವನ್ನು ಇದೇ ಜ.೧೪ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ವೃತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಭೋವಿ ಸಮಾಜದ ಮುಖಂಡ ಗೋವಿಂದ ಹೇಳಿದರು.
ಅವರಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ರವರ ೮೪೯ನೇ ಜಯಂತಿಯನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಉದ್ದೇಶಿಸಿದ್ದು ಇದೇ ಜ.೧೪ ರಂದು ಜಯಂತಿ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಈ ಕಾರ್ಯಕ್ರಮಕ್ಕೆ ರಾಯಚೂರು ನಗರ ಕ್ಷೇತ್ರದ ಶಾಸಕ, ಗ್ರಾಮೀಣ ಕ್ಷೇತ್ರದ ಶಾಸಕ, ಜಿಲ್ಲೆಯ ಸಂಸದರು, ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನಗರಸಭೆಯ ಅಧ್ಯಕ್ಷರು ಹಾಗೂ ಎಲ್ಲಾ ಸರ್ವ ಸದಸ್ಯರು, ನಗರಭೀವೃದ್ಧಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯತ್‌ಗೆ ಆಯ್ಕೆಯಾದ ಎಲ್ಲಾ ಸರ್ವ ಸದಸ್ಯರು ಮತ್ತು ಎಲ್ಲಾರಿಗೂ ನಮ್ಮ ಸಮಾಜ ವತಿಯಿಂದ ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಆಗಮಿಸುವವರು ಕೊರೋನಾ ವೈರಸ್ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಭೋವಿ ವಡ್ಡರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣ, ಉಪಾಧ್ಯಕ್ಷ ಆಂಜನೇಯ ಗಾಣಧಾಳ, ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ, ಖಜಾಂಚಿ ವಿರೇಶ ಸಿ.ಕೆ., ಶಶಿಕಲಾ ಭಿಮರಾಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.