ಜ.೧೪: ಶ್ರುತಿ ಸಾಹಿತ್ಯ ಮೇಳದ ೩೫ನೇ ವಾರ್ಷಿಕೋತ್ಸವ

ರಾಯಚೂರು,ಜ.೧೧- ಶ್ರುತಿ ಸಾಹಿತ್ಯ ಮೇಳದ ೩೫ ನೇ ವಾರ್ಷಿಕೋತ್ಸವದ ಅಂಗವಾಗಿ ಶ್ರುತಿ ಸಂಭ್ರಮ ಕಾರ್ಯಕ್ರಮವನ್ನು ಜನವರಿ ೧೪ ರಂದು ಸಂಜೆ ೫.೩೦ ಗಂಟೆಗೆ ನಗರದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಶ್ರೀ ಶಾರದಾ ವಿದ್ಯಾನಿಕೇತನ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರುತಿ ಸಾಹಿತ್ಯ ಮೇಳದ ಗೌರವಧ್ಯಕ್ಷ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಜಯಲಕ್ಷ್ಮಿ ಮಂಗಳ ಮೂರ್ತಿ ಅವರು ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಈ ಕಾರ್ಯಕ್ರಮವನ್ನು ಅಂತರಾಷ್ಟ್ರೀಯ ಖ್ಯಾತಿಯ ಹಾಸ್ಯ ಕಲಾವಿದ ಗಂಗಾವತಿ ಬಿ.ಪ್ರಾಣೇಶರವರು ಹಾಸ್ಯ ಸಂಜೆ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ನಗರದ ಖ್ಯಾತ ಕಲಾವಿದ ರಾಘವೇಂದ್ರ ಸಿ.ಎನ್. ಅವರಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದ್ದು,ಇದರ ಜೊತೆಗೆ ಶ್ರುತಿ ಸಾಹಿತ್ಯ ಮೆಳದ ಸದಸ್ಯರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಶ್ರುತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳೀಧರ ಕುಲಕರ್ಣಿ ಮಾತನಾಡಿ, ಈ ಕಾರ್ಯಕ್ರಮದ ಉದ್ಘಾಟನೆಯನ್ನು ನಗರದ ಶಾಸಕರಾದ ಶಿವರಾಜ್ ಪಾಟೀಲ್ ಅವರು ಮಾಡಲಿದ್ದಾರೆ.ಅಧ್ಯಕ್ಷತೆಯನ್ನು ಡಾ.ಜಯಲಕ್ಷ್ಮೀ ಮಂಗಳಮೂರ್ತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಶ್ರುತಿ ಸಾಹಿತ್ಯ ಮೇಳದ ಗೌರವಾಧ್ಯಕ್ಷ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಲಲಿತಾ ಕಡಗೋಲ ಆಂಜನೇಯ್ಯ, ಆರ್.ಡಿ. ಎ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಜಗನ್ನಾಥ ಕುಲಕರ್ಣಿ,ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾಧ್ಯಕ್ಷ ಡಿ.ಕೆ. ಮುರಳಿಧರ,ನಗರಸಭಾ ಸದಸ್ಯರಾದ ಎನ್.ಕೆ. ನಾಗರಾಜ, ಈ.ಶಶಿರಾಜ ಸೇರಿದಂತೆ ಇತರರು ಆಗಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಮೇಶ್ ಕುಲಕರ್ಣಿ,ಸುರೇಶ್ ಸೇರಿದಂತೆ ಇತರರು ಇದ್ದರು.