ಜ. ೧೭ ಆರ್.ಎ.ಎಫ್. ಘಟಕ ಶಾ ಉದ್ಘಾಟನೆ

ಶಿವಮೊಗ್ಗ, ಜ. ೯: ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಆರ್.ಎ.ಎಫ್. ಘಟಕದ ಉದ್ಘಾಟನೆಗೆ ಜ. ೧೭ ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರರವರು ಶನಿವಾರ ಕಾರ್ಯಕ್ರಮ ಆಯೋಜನೆಯ ಸ್ಥಳ ಪರಿಶೀಲನೆ ನಡೆಸಿದರು.
ಕಾರ್ಯಕ್ರಮದ ವೇದಿಕೆ ನಿರ್ಮಾಣ ಸೇರಿದಂತೆ ವಿವಿಧ ಪೂರ್ವ ಸಿದ್ದತೆಗಳನ್ನು ಸಂಸದರು ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು, ಆರ್.ಎ.ಎಫ್ ಘಟಕದ ಪ್ರಮುಖರು ಉಪಸ್ಥಿತರಿದ್ದರು.
ಮಹತ್ವದ ಘಟಕ: ಈ ಘಟಕವು ಕರ್ನಾಟಕ, ಗೋವಾ, ಕೇರಳ ಸೇರಿದಂತೆ ನಾಲ್ಕು ರಾಜ್ಯಗಳ ೩೮ ಜಿಲ್ಲೆಗಳ ಕಾರ್ಯವ್ಯಾಪ್ತಿಗೆ ಒಳಪಡಲಿದೆ. ಘಟಕ ನಿರ್ಮಾಣಕ್ಕೆ ಅಗತ್ಯವಾದ ಭೂಮಿಯನ್ನು ಈಗಾಗಲೇ ಜಿಲ್ಲಾಡಳಿತ ಮಂಜೂರು ಮಾಡಿದೆ.
ತುರ್ತು ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಆರ್‌ಎಎಫ್ ತುಕುಡಿಯನ್ನು ಕರೆಯಿಸಿಕೊಳ್ಳುವ ಅಗತ್ಯವಿತ್ತು. ಇದೀಗ ಘಟಕ ನಿರ್ಮಾಣದಿಂದ ರಾಜ್ಯಕ್ಕೆ ಸಾಕಷ್ಟು ಅನುಕೂಲವಾಗಲಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬುಳ್ಳಾಪುರದಲ್ಲಿ ಜ. ೧೭ ರಂದು ಆರ್.ಎ.ಎಫ್. ಘಟಕ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸಮಾರಂಭದ ಪೂರ್ವಸಿದ್ದತೆ ಪರಿಶೀಲನೆ ನಡೆಸಿದರು.)