ಜ ೩೦ ರಾಜ್ಯಮಟ್ಟದ ಟೈಲರ್ ಸಮಾವೇಶ

ರಾಯಚೂರು,ಜ.೨೭- ಜನವರಿ ೩೦ ರಂದು ರಜತಾ ಮಹೋತ್ಸವ ಮತ್ತು ರಾಜ್ಯಮಟ್ಟದ ಟೈಲರ್ ವೃತ್ತಿ ಬಾಂಧವರ ಬೃಹತ್ ಸಮಾವೇಶವನ್ನು ಬೆಂಗಳೂರಿನ ಶಾಲಿನಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಮಹ್ಮದ್ ಫಿರೋಜ್ ಹಮರಾಜ್ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದ ಅವರು, ಎಲ್ಲಾ ಟೈಲರ್ ವೃತ್ತಿ ಭಾಂದವರು ಈ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.