ಜ.೩೧: ದೇವಕುಸುಮಗಳು ಪುಸ್ತಕ ಬಿಡುಗಡೆ

ರಾಯಚೂರು,ಜ.೨೮- ಜನವರಿ ೩೧ರಂದು ನಗರದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತಿನ ವತಿಯಿಂದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಡಾ. ತಿಮ್ಮಯ್ಯ ಶೆಟ್ಟಿ ಇಲ್ಲೂರು ಅವರು ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೆಂಕಟೇಶ ಬೇವಿನಬೆಂಚಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ರಾದ ಡಾ. ತಿಮ್ಮಯ್ಯ ಶೆಟ್ಟಿ ಇಲ್ಲೂರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ತಾಳಿಕೋಟೆಯ ಎಸ್.ಜಿ.ಎಮ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್. ಎಮ್. ಸಜ್ಜನ್ ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಶಿಕ್ಷಕರು ಹಾಗೂ ಸಾಹಿತಿಗಳಾದ ಭೀಮೋಜಿರಾವ್ ಜಗತಾಪ್ ಅವರು ದೇವ ಕುಸುಮಗಳು ಕೃತಿ ಅವಲೋಕನ ಮಾಡಲಿದ್ದಾರೆ. ಮಕ್ಕಳ ಸಾಹಿತ್ಯ ಪರಿಷತ್ತಿನ ಕಲ್ಯಾಣ ಕರ್ನಾಟಕ ವಿಭಾಗದ ಸಂಘಟನಾ ಕಾರ್ಯದರ್ಶಿ ಶಂಕರದೇವರು ಹಿರೇಮಠ, ಮಾನ್ವಿಯ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಿ.ಕಿಶೋರ ಕುಮಾರ, ವಾಣಿಜ್ಯೋದ್ಯಮಿಗಳಾದ ಮಂಚಾಲ ರವಿ, ಸರ್ಕಾರಿ ಬಾಲಕಿಯರ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಇವರುಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿಲಿದ್ದಾರೆ. ಮಕ್ಕಳ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷರಾದ ಮಂಡಲಗಿರಿ ಪ್ರಸನ್ನ, ಕಾರ್ಯದರ್ಶಿಗಳಾದ ಡಾ. ವೆಂಕಟೇಶ ನವಲಿ, ಕೋಶಾಧ್ಯಕ್ಷರಾದ ಉದಯಕುಮಾರ್ ಇವರುಗಳು ಗೌರವ ಉಪಸ್ಥಿತಿಯಾಗಿ ಭಾಗವಹಿಸಲಿದ್ದು ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ಅಯ್ಯಪ್ಪಯ್ಯ ಹುಡಾ, ಕಾರ್ಯದರ್ಶಿ ಗಳಾ ಡಾ. ವೆಂಕಟೇಶ ನವಲಿ, ಮಾಧ್ಯಮ ಸಲಹೆಗಾರ ಲಕ್ಷ್ಮಣರಾವ್ ಕಪಗಲ್ ಸೇರಿದಂತೆ ಉಪಸ್ಥಿತರಿದ್ದರು.