ಜ.11ರಂದು ಕಾಂಗ್ರೆಸ್ ಸಂಕಲ್ಪ ಸಮಾವೇಶ

ದಾವಣಗೆರೆ,ಜ.09: ದಾವಣಗೆರೆ ಸೇರಿದಂತೆ ಬೆಳಗಾವಿ ವಿಭಾಗದ ಕಾಂಗ್ರೆಸ್ ಸಂಕಲ್ಪ ಸಮಾವೇಶವನ್ನು ಜ.11ರಂದು ಹುಬ್ಬಳ್ಳಿಯ ಕಾಟನ್ ಕೌಂಟಿ ರೆಸಾರ್ಟ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಂದು ನಡೆಯುವ ಒಂಭತ್ತು ಜಿಲ್ಲೆಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿರೋಧ ಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಈ ಸಮಾವೇಶದಲ್ಲಿ ಜಿಲ್ಲೆಯ ಪ್ರಮುಖರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್  ಕೃಪಾಕಟಾಕ್ಷದಿಂದ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದ್ದು, ಸ್ಮಾರ್ಟ್ಸಿಟಿ ಯೋಜನೆಯಡಿ ಈಗಾಗಲೇ ಅಭಿವೃದ್ಧಿಯಾಗಿರುವ ಕುಂದುವಾಡ ಕೆರೆಯಲ್ಲಿ 15 ಕೋಟಿ ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಹೀಗೆ ಜನರ ಹಣವನ್ನು ಬಿಜೆಪಿಯವರು ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ಚಮನ್‌ಸಾಬ್, ಗಡಿಗುಡಾಳ್ ಮಂಜುನಾಥ್, ಜಿ.ಪಂ. ಸದಸ್ಯ ಕೆ.ಎಚ್.ಓಬಳಪ್ಪ, ಮುಖಂಡರಾದ ಕೆ.ಎಂ.ಮಂಜುನಾಥ್, ಭಾಷಾ, ಯುವರಾಜ್, ಡಿ.ಶಿವಕುಮಾರ್ ಹಾಜರಿದ್ದರು.