ಜ.11 ರಂದು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರ ಲೋಕಾರ್ಪಣೆ : ದರ್ಶನಾಪುರ

ಕೆಂಭಾವಿ:ಜ.9:ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸಮುದಾಯ ಆರೋಗ್ಯ ಕೇಂದ್ರವು ಸುಸಜ್ಜಿತ ಕಟ್ಟಡದೊಂದಿಗೆ ಕಾಮಗಾರಿ ಪೂರ್ಣಗೊಂಡಿದ್ದು, ಜ.11 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆಸ್ಪತ್ರೆಯು ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಸೇವೆಗೆ ಸದಾ ಲಭ್ಯವಾಗಲಿದೆ. ಆಸ್ಪತ್ರೆಯಲ್ಲಿ ಹಲವು ಹುದ್ದೆಗಳು ಕಾಲಿ ಇದ್ದು ಆದಷ್ಟು ಬೇಗ ಅಗತ್ಯ ಸಿಬ್ಬಂದಿಗಳನ್ನು ನೇಮಕಮಾಡಿ ಈ ಭಾಗದ ರೋಗಿಗಳ ಹಿತ ಕಾಪಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಶಿವಾನಂದ ಪಾಟೀಲ ಅವರು ಈ ಕಾಮಾಗಾರಿಗೆ ಅನುದಾನ ಮಂಜೂರು ಮಾಡಿದ್ದರು. ಕಾಮಗಾರಿ ಪ್ರಾರಂಭವಾದಗನಿಂದ ಮುಗಿಯುವ ಹಂತದವರೆಗೆ ಹಲವಾರು ಬಾರಿ ಭೇಟಿ ನೀಡಿ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಅಧಿಕಾರಿಗಳಿಗೆ, ಗುತ್ತೆದಾರರಿಗೆ ಸೂಚಿಸಿರುವುದರಿಂದ ಆಸ್ಪತ್ರೆಯು ಸುಸಜ್ಜಿತ ಕಟ್ಟಡದಿಂದ ನಿರ್ಮಾಣಗೊಂಡು ಉದ್ಘಾಟನೆಗೆ ಬಂದು ನಿಂತಿದೆ ಎಂದು ಹೇಳಿದರು.