ಜ. 15 ಕ್ಕೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆಗೆ ನಿರ್ಧಾರ

ಕಲಬುರಗಿ,ಜ.7: ಜಿಲ್ಲಾಡಳಿತ ವತಿಯಿಂದ ಇದೇ ಜನವರಿ 15 ರಂದು ಬೆಳಿಗ್ಗೆ 11.30 ರಂದು ಡಾ.ಎಸ್.ಎಂ.ಪಂಡಿತ್ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಂಭಾಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಅಧಿಕಾರಿಗಳು ತಮ್ಮ ನೀಡಿದ ಕೆಲಸಗಳನ್ನು ಜವಾಬ್ದಾರಿ ಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಠಚಾರದ ತಹಶಿಲ್ದಾರ ಸೈಯದ್ ನಿಸಾರ ಅಹ್ಮದ ಅವರು ಅಧಿಕಾರಿಗಳಿಗೆ ಸೂಚಿಸಿದರು.
ವೇದಿಕೆ ಒಬ್ಬ ಸಮಿತಿಅಧ್ಯಕ್ಷರನ್ನು ಹಾಗೂ ಉಪನ್ಯಾಸ ಕರನ್ನು ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ಮಾತನಾಡಿ, ಜಾನಪದ, ಸಂಗೀತ ಕಾರ್ಯಕ್ರಮಗಳು ಜರಗಲಿವೆ.ವೇದಿಕೆ ಆಲಂಕಾರ ಮಾಡಲಾಗುವುದು ಬ್ಯಾನರಗಳು ಆಮಂತ್ರಣ ಪತ್ರಗಳು ಮುದ್ರಿಸಲಾಗುದು ಎಂದು ಸಭೆಯಲ್ಲಿ ತಿಳಿಸಿದರು.
ಸರಕಾರಿ ಅರೆ ಸರಕಾರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬೆಳಿಗ್ಗೆ 9 ಗಂಟೆಗೆ ಆಚರಿಸಬೇಕೆಂದರು. ಮೆರವಣಿಗೆ ಮೂಲಕ ಡಾ.ಎಸ್.ಎಂ.ಪಂಡಿತ ರಂಗಮಂದಿರ ಆಗಮಿಸಲಾಗುತ್ತಿದೆ ಎಂದು ಸಮಾಜದ ಮುಖಂಡರು ಸಭೆಯಲ್ಲಿ ತಿಳಿಸಿದರು.ಅನೇಕರು ತಮ್ಮ ಸಲಹೆ ಸೂಚನೆಗಳನ್ನು ಸಭೆಯಲ್ಲಿ ನೀಡಿದರು.
ಸಭೆಯಲ್ಲಿ ಅಧಿಕಾರಗಳು ಜಿಲ್ಲಾ ಭೋವಿ ವಡ್ಡರ ಸಮಾಜದ ಅಧ್ಯಕ್ಷರಾದ ಮಲ್ಲಿಕಾರ್ಜುಜ ಬಿ ಕುಸ್ತಿ, ಉಪಾಧ್ಯಕ್ಷರಾದ ರಾಘವೇಂದ್ರ ಲಸ್ಕರೆ, ಯಲ್ಲಪ್ಪ ಮೇಳಕುಂದ ಗ್ರಾಮ. ಸದಸ್ಯ ಸಮಾಜದ ಮುಖಂಡರಾದ ರಾಜು ಗುತ್ತೇದಾರ ಆಂದೇಲಿ, ರವಿಚಂದ್ರ ಗುತ್ತೇದಾರ ವಕೀಲರು ಶಿವಶಂಕರ ಭೋವಿ ಉಪಸ್ಥಿತರಿದ್ದರು.